LATEST NEWS
ಕೇರಳ – ಜೀವಂತ ಮೀನು ಗಂಟಲಲ್ಲಿ ಸಿಲುಕಿ ಯುವಕ ಸಾವು

ಕೇರಳ ಮಾರ್ಚ್ 03: ಕೆರೆಯಿಂದ ನೀರನ್ನು ತೆಗೆದು ಅದರಲ್ಲಿದ್ದ ಮೀನು ಹಿಡಿಯುವ ವೇಳೆ ಜೀವಂತ ಮೀನೊಂದು ಯುವಕನ ಗಂಟಲೊಳಗೆ ಸಿಲುಕಿ ಯುವಕ ಸಾವನಪ್ಪಿದ ಘಟನೆ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕ ಸಂಜೆ 4.30ರ ಸುಮಾರಿಗೆ ತನ್ನ ಸ್ನೇಹಿತರೊಂದಿಗೆ ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದಾಗ ಈ ಘಟನೆ ನಡೆದಿದೆ. ಇನ್ನೊಂದು ಮೀನನ್ನು ಹಿಡಿಯಲು ಯತ್ನಿಸುತ್ತಿದ್ದಾಗ ಮೀನೊಂದು ಆತನ ಬಾಯಿ ಕಚ್ಚಿಕೊಂಡು ಗಂಟಲೊಳಗೆ ಹೋಗಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಆತನ ಪ್ರಾಣ ಉಳಿಸಲಾಗಲಿಲ್ಲ.

ಆದರ್ಶ್ ಮೃತದೇಹವನ್ನು ಕಾಯಂಕುಲಂ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.