LATEST NEWS
ಕುಂದಾಪುರ ಒಂದೇ ದಿನ 141 ಕೊರೊನಾ ಪ್ರಕರಣ ದಾಖಲು

ಉಡುಪಿ ಅಗಸ್ಟ್ 17: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 270 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 8245 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಒಂದು ಸಾವು ಸಂಭವಿಸಿದೆ.
ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5630 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2537 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1372 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1165 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಒಂದು ಸಾವು ಸಂಭವಿಸಿದೆ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 78 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 107, ಕುಂದಾಪುರ -141 , ಕಾರ್ಕಳ -15, ಜಿಲ್ಲೆಯ ಹೊರಗಿನ – 7 ಪ್ರಕರಣಗಳಿವೆ.
