BELTHANGADI
ತಂದೆಯಿಂದಲೇ ಮಗನ ಹತ್ಯೆ
ತಂದೆಯಿಂದಲೇ ಮಗನ ಹತ್ಯೆ
ಬೆಳ್ತಂಗಡಿ ಫೆಬ್ರವರಿ 12: ಹಳೆಯ ದ್ವೇಷದ ಹಿನ್ನಲೆಯಲ್ಲಿ ಮಗನನ್ನು ತಂದೆಯೇ ಕೊಲೆ ಮಾಡಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಸಬಾ ಗ್ರಾಮದ ಮಟ್ಲ ಎಂಬಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ವ್ಯಕ್ತಿಯನ್ನು ನವೀನ್ ಎಂದು ಗುರುತಿಸಲಾಗಿದೆ. ನವೀನ್ ಈ ಮೊದಲು ಡಿಸೆಂಬರ್ 31 ರಂದು ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡಿ ತಂದೆಯ ಮೇಲೆ ಹಲ್ಲೆ ಮಾಡಿದ್ದ, ಈ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.
ಈ ನಡುವೆ ನಿನ್ನೆ ರಾತ್ರಿ ಊಟ ಮಾಡುತ್ತಿದ್ದ ಸಂದರ್ಭ ತಂದೆ ಹಾಗೂ ಮಗ ನವೀನ್ ನಡುವೆ ಮಾತಿಗೆ ಮಾತು ಬೆಳೆದಿದೆ. ಇಂದು ಗಂಭೀರ ಹಂತಕ್ಕೆ ತಲುಪಿದ ಹಿನ್ನಲೆಯಲ್ಲಿ ತಂದೆ ಹಾಗೂ ನವೀನ್ ನ ಸಹೋದರ ಸೇರಿ ನವೀನ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಯಲ್ಲಿ ನವೀನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login