KARNATAKA
ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : 17 ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು, ಅಕ್ಟೋಬರ್ 16 : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಇಂದಿನಿಂದ ಅ. 18ರವರೆಗೆ ಮಳೆಯಾಗಲಿದೆ. ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ದಕ್ಷಿಣ ಒಳನಾಡಿನ ಬಳ್ಳಾರಿ, ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.