LATEST NEWS
ದಕ್ಷಿಣಕನ್ನಡ ಜಿಲ್ಲೆ 307 ಕೊರೊನಾ ಪ್ರಕರಣ 6 ಸಾವು
ಮಂಗಳೂರು ಅಗಸ್ಟ್ 14: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು ಮತ್ತೆ 307 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 307 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 8378 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 242 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2007 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಕೂಡ ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 256 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -197, ಬಂಟ್ವಾಳ – 57, ಸುಳ್ಯ -17, ಬೆಳ್ತಂಗಡಿ – 14, ಪುತ್ತೂರು – 14, ಹೊರ ಜಿಲ್ಲೆಯವರು – 8 ಪ್ರಕರಣಗಳಿವೆ.
You must be logged in to post a comment Login