LATEST NEWS
ಉಡುಪಿ ಜಿಲ್ಲೆಯಲ್ಲಿ ಕೊರೊನಾಗೆ 3 ನೇ ಬಲಿ

ಉಡುಪಿ ಜೂನ್ 30: ಉಡುಪಿಯಲ್ಲಿ ಕೊರೊನಾ ಮೂರನೆ ಬಲಿ ಪಡೆದಿದೆ. ಮುಂಬೈನಿಂದ ಬಂದಿದ್ದ 48 ವರ್ಷದ ಕೋವಿಡ್ ಸೋಂಕಿತ ವ್ಯಕ್ತಿ ಭಾನುವಾರ ಬೈಂದೂರಿನ ಕಾಲ್ತೋಡು ಗ್ರಾಮದಲ್ಲಿ ಮೃತಪಟ್ಟಿದ್ದಾರೆ.
ಯಕೃತ್ತು ವೈಫಲ್ಯದಿಂದ ಬಳಲುತ್ತಿದ್ದ ವ್ಯಕ್ತಿ ಈಚೆಗೆ ಕುಟುಂಬ ಸದಸ್ಯರೊಂದಿಗೆ ಜಿಲ್ಲೆಗೆ ಬಂದಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿರಲಿಲ್ಲ. ಮರಣಾನಂತರ ವ್ಯಕ್ತಿಯ ಗಂಟಲ ದ್ರವ ಪರೀಕ್ಷೆಗೊಳಪಡಿಸಿದಾಗ ಸೋಂಕು ಇರುವುದು ಪತ್ತೆಯಾಗಿದ್ದು ಮಾರ್ಗಸೂಚಿಗಳ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಮೃತ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೂ ಕೋವಿಡ್ ಸೋಂಕಿಗೆ ತುತ್ತಾಗಿದ್ದ ಮೂವರು ಮೃತಪಟ್ಟಿದ್ದಾರೆ.
