KARNATAKA
ಬೆಂಗಳೂರು – ಭೀಕರ ರಸ್ತೆ ಅಪಘಾತಕ್ಕೆ ನಾಲ್ವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳ ಸಾವು

ಬೆಂಗಳೂರು ಫೆಬ್ರವರಿ 16: ಪ್ರವಾಸಕ್ಕೆಂದು ತೆರಳಿದ್ದ ನಾಲ್ವರು ಇಂಜಿನಿಯರಿಂಗ್ ವಿಧ್ಯಾರ್ಥಿಗಳು ಭೀಕರ ರಸ್ತೆ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಬಳಿಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಈ ಘಟನೆ ನಡೆದಿದೆ.
ಮೃತಪಟ್ಟ ವಿದ್ಯಾರ್ಥಿಗಳೆಲ್ಲರೂ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು, ಮೃತರನ್ನು ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ. ಗಾಯಗೊಂಡಿರುವಂತ ಸಿರಿಕೃಷ್ಣ ಮತ್ತು ಅಂಕಿತಾ ರೆಡ್ಡಿ ಸ್ಥಿತಿ ಗಂಭೀರವಾಗಿದೆ.

ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಮೃತ ವಿದ್ಯಾರ್ಥಿಗಳು ಜಾಲಿ ರೈಡ್ ಗೆ ತೆರಳಿ, ವಾಪಾಸ್ ಆಗುತ್ತಿದ್ದರೆಂದು ತಿಳಿದು ಬಂದಿದೆ. ಕೆಆರ್ ಪುರಂನ ಗಾರ್ಡನ್ ಸಿಟಿ ಕಾಲೇಜಿನ ಆರು ಜನ ವಿದ್ಯಾರ್ಥಿಗಳು ಕೋಲಾರದ ನರಸಾಪುರ ಬಳಿಯಿರೂ ಕೆಫೆ ಕಾಫಿ ಡೇ ಗೆ ಲಾಂಗ್ ಡ್ರೈವ್ ಹೋಗಿದ್ದು ತಮಿಳುನಾಡು ನೋಂದಣಿಯ TN-77-P-4512 ಸ್ವಿಫ್ಟ್ ಕಾರಿನಲ್ಲಿ ಕೋಲಾರದ ಕಡೆಯಿಂದ ಬೆಂಗಳೂರು ಕಡೆಗೆ ವಾಪಸ್ಸಾಗ್ತಿದ್ರು.
ಈ ವೇಳೆ ಬೆಂಗಳೂರಿನತ್ತ ಬರ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಮೊದಲಿಗೆ ರಸ್ತೆ ಮಧ್ಯೆಯ ಡಿವೈಡರ್ ಗೆ ಡಿಕ್ಕಿ ಹೋಡೆದು ಮೇಲಕ್ಕೆ ಹಾರಿದೆ. ನಂತರ ನೂರು ಮೀಟರ್ಗೂ ಅಧಿಕ ದೂರ ಹೆದ್ದಾರಿಯಲ್ಲಿ ಪಲ್ಟಿ ಹೊಡೆದು ಬೆಂಗಳೂರು ಕಡೆಯಿಂದ ಕೋಲಾರದ ಕಡೆಗೆ ಹೋಗ್ತಿದ್ದ AP-07-TH-6898 ಸಂಖ್ಯೆಯ ಲಾರಿಗೆ ಡಿಕ್ಕಿ ಹೊಡೆದು ನಂತರ ಹೆದ್ದಾರಿ ಬದಿಯ ಹಳ್ಳಕ್ಕೆ ಬಿದ್ದಿದೆ. ಈ ಪರಿಣಾಮ ಕಾರು ಸಂಪೂರ್ಣ ನಜ್ಜು ಗುಜ್ಜಾಗಿ ಜಖಂಗೊಂಡಿದ್ದು ಕಾರಿನಲ್ಲಿದ್ದ ವೆಂಕಟ್. ಸಿರಿಲ್. ವೈಷ್ಣವಿ.ಭರತ್ ಎಂಬುವರು ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.