Connect with us

BANTWAL

ಬಂಟ್ವಾಳ : 40 ಕೆಜಿ ಗಾಂಜಾ ಪತ್ತೆ

ಬಂಟ್ವಾಳ ಸೆಪ್ಟೆಂಬರ್ 8: ಬಂಟ್ವಾಳ ನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಪುತ್ತೂರಿನ ವ್ಯಕ್ತಿಯೊಬ್ಬನ ಮನೆಯಿಂದ ನಲವತ್ತು ಕೆಜಿ ಗಾಂಜಾವನ್ನುವಶಪಡಿಸಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಹಮದ್ ಸಾಬಿತ್ ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿ ಮೀನಿನ ಲಾರಿಯಲ್ಲಿ ಚಾಲಕನಾಗಿ ದುಡಿಯುತ್ತಿದ್ದು. ಗಾಂಜಾವನ್ನು ಆಂಧ್ರಪ್ರದೇಶದಿಂದ ತಂದಿರುವ ಶಂಕೆ ವ್ಯಕ್ತಪಡಿಸಲಾಗಿದೆ. ಪಡಿಸಿಕೊಂಡಿರುವ ಗಾಂಜಾ ಮೌಲ್ಯ ಸುಮಾರು 20 ಲಕ್ಷ ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರೆಸಲಾಗಿದೆ.  ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ.

Facebook Comments

comments