LATEST NEWS
ಡ್ರಗ್ಸ್ ದಂಧೆ – ಮಣಿಪಾಲ ವಿವಿಯ 42 ವಿದ್ಯಾರ್ಥಿಗಳು ಸಸ್ಪೆಂಡ್
ಉಡುಪಿ ಫೆಬ್ರವರಿ 23: ಡ್ರಗ್ಸ್ ಸೇವನೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ 42 ವಿಧ್ಯಾರ್ಥಿಗಳನ್ನು ಮಣಿಪಾಲ ವಿಶ್ವವಿದ್ಯಾನಿಲಯವು ಅಮಾನತುಗೊಳಿಸಿದೆ.
ಈ ಕುರಿತಂತೆ ಮಾಹಿತಿ ನೀಡಿರುವ ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ ಮಚ್ಚೀಂದ್ರ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ನಾವು ಹಲವಾರು ಡ್ರಗ್ಸ್ ಪ್ರಕರಣಗಳನ್ನು ಪತ್ತೆ ಮಾಡಿದ್ದೇವೆ. ಈ ಕಾರ್ಯಾಚರಣೆಯಲ್ಲಿ ಅನೇಕ ಮಂದಿ ಪೆಡ್ಲರ್ ಗಳನ್ನ ವಶಕ್ಕೆ ತೆಗೆದುಕೊಂಡಿದ್ದೇವೆ. ಪೆಡ್ಲರ್‌ಗಳ ಮೂಲಕ ಗ್ರಾಹಕರು ಯಾರೂ ಅನ್ನೋದು ಪತ್ತೆಯಾಗಿದೆ. ಮಣಿಪಾಲ ವಿವಿಯ ಕೆಲ ವಿದ್ಯಾರ್ಥಿಗಳು ಕೂಡಾ ಪೆಡ್ಲರ್‌ಗಳಾಗಿದ್ದಾರೆ ಎಂಬುದೂ ತನಿಖೆಯಲ್ಲಿ ತಿಳಿದುಬಂದಿದೆ. ಹೆಚ್ಚಿನ ಪ್ರಮಾಣದ ಮಾದಕ ದ್ರವ್ಯಗಳು ಪತ್ತೆಯಾಗಿದೆ ಎಂದು ಹೇಳಿದ್ದಾರೆ.
ಈ ಹಿನ್ನಲೆ ವಿಶ್ವವಿದ್ಯಾಲಯ ಹಾಗೂ ಪೊಲೀಸರು ನಡೆಸಿದ ಆಂತರಿಕ ತನಿಖೆಯಲ್ಲಿ ದೃಢಪಟ್ಟನಂತರ 42 ವಿದ್ಯಾರ್ಥಿಗಳನ್ನು ಒಂದು ತಿಂಗಳ ಮಟ್ಟಿಗೆ ಅಮಾನತುಗೊಳಿಸಿ ವಿವಿ ಆದೇಶಿಸಿದೆ. ಭವಿಷ್ಯದ ದೃಷ್ಟಿಯಿಂದ ಈ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದು, ಆರೋಗ್ಯಕರ ವಾತಾವರಣ ಸೃಷ್ಟಿಸಲು ಬದ್ಧರಾಗಿರುವುದಾಗಿ ವಿಶ್ವವಿದ್ಯಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.