Connect with us

    LATEST NEWS

    ಉಡುಪಿ ಒಂದೇ ದಿನ 421 ಕೊರೊನಾ ಪ್ರಕರಣ ದಾಖಲು

    ಉಡುಪಿ ಅಗಸ್ಟ್ 18: ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 421 ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 8666 ಕ್ಕೆ ಏರಿಕೆಯಾಗಿದೆ. ಉಡುಪಿಯಲ್ಲಿ ಇಂದು ಕೊರೊನಾದಿಂದಾಗಿ ಯಾವುದೇ ಸಂಭವಿಸಿಲ್ಲ.


    ಉಡುಪಿ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 5951 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2637 ಸಕ್ರಿಯ ಪ್ರಕರಣಗಳಿದ್ದು ಅದರಲ್ಲಿ 1321 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ 1316 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಇಂದು ಉಡುಪಿಯಲ್ಲಿ ಕೊರೊನಾದಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ. ಉಡುಪಿ ಜಿಲ್ಲೆಯಲ್ಲಿ ಇದುವರೆಗೆ 78 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದಾರೆ. ಇಂದು ದಾಖಲಾದ ಪ್ರಕರಣಗಳಲ್ಲಿ ಉಡುಪಿ – 203, ಕುಂದಾಪುರ -158 , ಕಾರ್ಕಳ -50, ಜಿಲ್ಲೆಯ ಹೊರಗಿನ – 7 ಪ್ರಕರಣಗಳಿವೆ.

    Share Information
    Advertisement
    Click to comment

    You must be logged in to post a comment Login

    Leave a Reply