Connect with us

LATEST NEWS

ದಕ್ಷಿಣಕನ್ನಡ ಜಿಲ್ಲೆಯಲ್ಲಿ 44 ಕೊರೊನಾ ಪ್ರಕರಣ ದಾಖಲು

ಮಂಗಳೂರು ಜೂನ್ 30: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 44 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 741ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 2 ಪ್ರಕರಣಗಳು ಸೌದಿ ಅರೇಬಿಯಾ, 1 ಅಂತರ್ ರಾಜ್ಯ, 3 ಅಂತರ್ ಜಿಲ್ಲೆಯಿಂದ ಆಗಮಿಸಿದವರಾಗಿದ್ದು, 9 ಪ್ರಕರಣಗಳು ILI ಆಗಿದ್ದು, 3 SARI ಪ್ರಕರಣಗಳು, ಇನ್ನು 5 ಕೊರೊನಾ ಸೊಂಕಿತ ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದ್ದು, 21 ಕೊರೊನಾ ಪ್ರಕರಣಗಳು ಕೊರೊನಾ ರೋಗಿಯ ಪ್ರಾಥಮಿಕ ಸಂಪರ್ಕದಿಂದ ಬಂದಿದೆ.

ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಬ್ಬರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 385 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 342 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 14 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

Facebook Comments

comments