BANTWAL
ಬಂಟ್ವಾಳ: ಅಪ್ರಾಪ್ತೆ ಬಾಲಕಿ ಮೇಲೆ ಗ್ಯಾಂಗ್ ರೇಪ್, ಮತ್ತು ಬರಿಸುವ ಚಾಕಲೇಟ್ ನೀಡಿ ಕೃತ್ಯ
ಬಂಟ್ವಾಳ, ಅಕ್ಟೋಬರ್ 09: ಬಂಟ್ವಾಳದ ಅಮ್ಟಾಡಿ ಗ್ರಾಮದ ಕೆಂಪುಗುಡ್ಡೆ ಎಂಬಲ್ಲಿ ಅಪ್ರಾಪ್ತೆ ಬಾಲಕಿಗೆ ಮತ್ತು ಬರಿಸಿ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ.
ಅಪ್ರಾಪ್ತೆ ಬಾಲಕಿ ಮೇಲೆ ಐವರು ಕಾಮುಕರಿಂದ ಗ್ಯಾಂಗ್ ರೇಪ್ ಕೃತ್ಯ ನಿನ್ನೆ ನಡೆದಿದ್ದು. ಬಂಟ್ವಾಳದ ಎಸ್ ವಿ ಎಸ್ ಶಾಲೆಯ ಆಟೋ ಸ್ಟಾಂಡ್ ನಲ್ಲಿ ನಿಂತಿದ್ದ ಬಾಲಕಿಗೆ ಮತ್ತು ಬರಿಸುವ ಚಾಕಲೇಟ್ ನೀಡಿ ಅಪಹರಿಸಸಲಾಗಿದೆ. ಬಳಿಕ ಆಕೆಯನ್ನು ಬಂಟ್ವಾಳದ ಅಮ್ಟಾಡಿಯ ರೂಂ ಒಂದಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ.
ಬಾಲಕಿ ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸರಿಂದ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
You must be logged in to post a comment Login