Connect with us

    DAKSHINA KANNADA

    ರಾಜ್ಯದಲ್ಲಿ 49 ಸಾವಿರ ಅಪ್ರಾಪ್ತ ಗರ್ಭಿಣಿಯರು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ..!

    ಮಂಗಳೂರು : ರಾಜ್ಯದಲ್ಲಿ ಸುಮಾರು 49ಸಾವಿರದಷ್ಟು ಮಂದಿ ಅಪ್ರಾಪ್ತೆಯರು ಗರ್ಭಿಣಿಯರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕಳವಳ ವ್ಯಕ್ತಪಡಿಸಿದೆ.

    ಆಯೋಗದ ಅಧ್ಯಕ್ಷ ನಾಗಣ್ಣ ಗೌಡ ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದರು. ಅಪ್ರಾಪ್ತ ಗರ್ಭಿಣಿಯರ ಈ ಸಂಖ್ಯೆ ಆತಂಕಕಾರಿಯಾಗಿದ್ದು,ಮತ್ತೆ ಡಿಎಚ್ಒ ಹಾಗೂ ಆಶಾ – ಅಂಗನವಾಡಿ ಕಾರ್ಯಕರ್ತೆಯರ ಸಹಯೋಗದಲ್ಲಿ ಮತ್ತೊಮ್ಮೆ ಸರ್ವೇ ನಡೆಸಲಾಗುತ್ತಿದೆ. ಪರಿಶೀಲನೆ ಮಾಡುವ ಸಂದರ್ಭ ಅಪ್ರಾಪ್ತ ಗರ್ಭಿಣಿಯರಲ್ಲಿಯೇ ಕೂಲಂಕಷವಾಗಿ ಮಾಹಿತಿ ಪಡೆದು ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಕಲ್ಯಾಣ ಕರ್ನಾಟಕ, ಮಂಡ್ಯ ಭಾಗದಲ್ಲಿ ಹೆಚ್ಚಿನ ಪ್ರಕರಣಗಳು ದಾಖಲಾಗಿವೆ. ಹದಿನೆಂಟು ತುಂಬುವ ಮೊದಲೇ ವಿವಾಹ, ಅತ್ಯಾಚಾರ, ಪ್ರೀತಿಯ ನೆಪದಲ್ಲಿ ದೈಹಿಕ ಸಂಪರ್ಕ ಹೀಗೆ ಹಲವಾರು ರೀತಿಯಲ್ಲಿ ಅಪ್ರಾಪ್ತೆಯರು ಗರ್ಭಿಣಿಯರಾಗುತ್ತಿರುವ ಭಯಾನಕ ಪ್ರಕರಣಗಳು ದಿನಾ ಬಯಲಾಗುತ್ತಿದೆ. ಇಂತಹ ಪ್ರಕರಣಗಳು ಬಹಳ ಸೂಕ್ಷ್ಮವಾಗಿದ್ದು, ಸಂತ್ರಸ್ತ ಬಾಲಕಿಯರಿಗೆ ಹೆಚ್ಚಿನ ಮಟ್ಟದ ಸಾಂತ್ವನದ ಅಗತ್ಯವಿದೆ. ಕೆಲವೊಂದು ಪ್ರಕರಣಗಳಲ್ಲಿ ಸಂತ್ರಸ್ತೆಯರು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳೂ ಬೆಳಕಿಗೆ ಬಂದಿದೆ. ಇಂತಹ ಪ್ರಕರಣಗಳನ್ನು ಮುಚ್ಚಿಟ್ಟ ವಿಚಾರದಲ್ಲಿ ಈಗಾಲೇ 6 – 7 ವೈದ್ಯರ ಮೇಲೆಯೇ ಎಫ್‌ಐಆರ್ ದಾಖಲಾಗಿದೆ. ಅಲ್ಲದೆ ಒಂದೆರಡು ನರ್ಸಿಂಗ್ ಹೋಮ್ ಗಳನ್ನೇ ಮುಚ್ಚಲಾಗಿದೆ ಎಂದರು.ಆದ್ದರಿಂದ ಮಕ್ಕಳಿಗೆ 18ವರ್ಷದವರೆಗೆ ಕಡ್ಡಾಯವಾಗಿ ಶಿಕ್ಷಣ ಪಡೆಯುವಂತೆ ಮಾಡಬೇಕು. ಅದಕ್ಕಾಗಿ ಡಿಡಿಪಿಐ ಹಾಗೂ ಬಿಇಒ ಅವರುಗಳು ಮಕ್ಕಳು 18ವರ್ಷಗಳವರೆಗೆ ಶಾಲೆ – ಕಾಲೇಜು ತೊರೆಯದಂತೆ ಗಮನಹರಿಸಬೇಕು. ಪರಿಣಾಮ 90 ಪ್ರತಿಶತ ಬಾಲ್ಯ ಕಾರ್ಮಿಕ, ಬಾಲ್ಯ ವಿವಾಹವನ್ನು ತಪ್ಪಿಸಿದಂತಾಗುತ್ತದೆ ಎಂದು ನಾಗಣ್ಣ ಗೌಡ ಹೇಳಿದರು.

    Share Information
    Advertisement
    Click to comment

    You must be logged in to post a comment Login

    Leave a Reply