KARNATAKA
ಶಾಲೆಯಲ್ಲಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತಕ್ಕೆ 4ನೇ ತರಗತಿ ವಿಧ್ಯಾರ್ಥಿ ಸಾವು

ಚಾಮರಾಜನಗರ ಜುಲೈ 09: ನಾಲ್ಕನೆ ತರಗತಿ ವಿಧ್ಯಾರ್ಥಿಯೊಬ್ಬ ತರಗತಿಯಲ್ಲಿ ಪಾಠ ಕೇಳುತ್ತಿರುವಾಗಲೇ ಹೃದಯಾಘಾತದಿಂದ ಸಾವನಪ್ಪಿದ ಘಟನೆ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು ದೊಡ್ಡಹುಂಡಿ ಗ್ರಾಮದ ನಾಗರಾಜು-ನಾಗರತ್ನ ಪುತ್ರ ಮನೋಜ್ ಕುಮಾರ್ (10) ಎಂದು ಗುರುತಿಸಲಾಗಿದೆ. ಬಾಲಕ ನಾಲ್ಕನೇ ತರಗತಿಯಲ್ಲಿ ಓದುತ್ತಿದ್ದ.ಶಾಲೆಯಲ್ಲಿ ಪಾಠ ಕೇಳುತ್ತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದಿದ್ದು, ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾನೆ. ವಿದ್ಯಾರ್ಥಿ ಕಳೆದ ಎರಡು ವರ್ಷಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ. ಹೀಗಾಗಿ ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದರು ಎಂದು ಡಿಡಿಪಿಐ ರಾಮಚಂದ್ರ ರಾಜೇ ಅರಸ್ ಮಾಹಿತಿ ಕೊಟ್ಟಿದ್ದಾರೆ.

2 Comments