Connect with us

    LATEST NEWS

    ನಗರದಲ್ಲಿ ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ 5 ಮಂದಿಯ ಬಂಧನ

    ನಗರದಲ್ಲಿ ಕೋಕೆನ್ ಮಾರಾಟ ಮಾಡಲು ಯತ್ನಿಸುತ್ತಿದ್ದ 5 ಮಂದಿಯ ಬಂಧನ

    ಮಂಗಳೂರು ಅಗಸ್ಟ್ 17: ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಬೃಹತ್ ಜಾಲವನ್ನು ಭೇಧಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದು, 5 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

    ಬಂಧಿತರನ್ನು ಕಾಸರಗೋಡಿನ ನಿವಾಸಿ ವಿಜೇಶ್ ಕುಮಾರ್, ಪುತ್ತೂರಿನ ನಿವಾಸಿ ನಿತಿನ್, ಮಂಗಳೂರು ನಿವಾಸಿಗಳಾದ ಸಂತೋಷ್ ಕುಮಾರ್, ಸಂದೀಪ್ ಕುಮಾರ್ ಹಾಗೂ ರಾಹುಲ್ ಎಂದು ಗುರುತಿಸಲಾಗಿದೆ.

    ಬಂಧಿತರು ಮಂಗಳೂರು ನಗರದಲ್ಲಿ ಮಾದಕ ವಸ್ತುವಾದ ಕೋಕೆನ್ ನ್ನು ತಮ್ಮ ಕಾರುಗಳಲ್ಲಿ ಯುವಕರಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಕೋಕೆನ್ ನನ್ನು ಹೊಂದಿದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತರಿಂದ ಅವರಿಂದ ರೂ. 50,000/- ಮೌಲ್ಯದ ಮಾದಕ ವಸ್ತುವಾದ ಕೋಕೆನ್ ನ್ನು ಸ್ವಾಧೀನ ಪಡಿಸಿಕೊಂಡಿರುತ್ತಾರೆ. ಆರೋಪಿಗಳು ಗೋವಾದಿಂದ ಈ ಮಾದಕ ವಸ್ತುಗಳನ್ನು ತಂದು ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು. ಆರೋಪಿಗಳಿಂದ, ಹೊಂಡಾ ಜಾಝ್, ಹುಂಡೈ ಐ20, ಮಾರುತಿ ಝೆನ್, 7 ಮೊಬೈಲ್ ಫೋನ್ ಹಾಗೂ ನಗದು ಹಣ ರೂ. 1,02,000/- ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

    ವಶಪಡಿಸಿಕೊಂಡ ಸೊತ್ತಿನ ಆಂದಾಜು ಒಟ್ಟು ಮೌಲ್ಯ ರೂ. 19,57,000/- ಆಗಿದೆ. ಆರೋಪಿಗಳು ಮಂಗಳೂರು ನಗರದಲ್ಲಿ ಹಲವು ವ್ಯಕ್ತಿಗಳಿಗೆ ಈ ಮಾದಕ ವಸ್ತುವಾದ ಕೋಕೆನ್ ನ್ನು ಮಾರಾಟ ಮಾಡಿರುವ ಬಗ್ಗೆ ತಿಳಿದುಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply