KARNATAKA
ಗದಗ : ಸರ್ಕಾರಿ ಬಸ್- ಟಾಟಾ ಸುಮೋ ಮುಖಾಮುಖಿ ಡಿಕ್ಕಿ, 5 ಮಂದಿ ಮೃತ್ಯು..!
ಗದಗ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗದಗ : ಗದಗ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆ ಸರ್ಕಾರಿ ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗದಗ ಜಿಲ್ಲೆ ನರೇಗಲ್ ಪಟ್ಟಣದ ಹೊರ ವಲಯದಲ್ಲಿ ಈ ದುರ್ಘನೆ ಸಂಭವಿಸಿದೆ.
ನರೇಗಲ್ ಗದ್ದಿಹಳ್ಳದ ಬಳಿ ಸಾಗುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಬಸ್ ಹಾಗೂ ಟಾಟಾಸುಮೋ ಮಧ್ಯೆ ಡಿಕ್ಕಿ ಆಗಿದೆ.
ಗಜೇಂದ್ರಗಡ ಕಡೆಯಿಂದ ಶಿರಹಟ್ಟಿ ಫಕ್ಕಿರೇಶ್ವರ ಮಠಕ್ಕೆ ಹೊರಟಿದ್ದ ಈ ಟಾಟಾ ಸೊಮೊದಲ್ಲಿದ್ದ 5 ಮಂದಿ ಕೂಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇನ್ನು ಬಸ್ ನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ನರೇಗಲ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ನರೇಗಲ್ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
You must be logged in to post a comment Login