Connect with us

    KARNATAKA

    ಮೈಸೂರು – 5 ರೂಪಾಯಿ ನಾಣ್ಯ ನುಂಗಿ ನಾಲ್ಕು ವರ್ಷದ ಹೆಣ್ಣು ಮಗು ಸಾವು

    ಮೈಸೂರು : ನಾಲ್ಕು ವರ್ಷದ ಹೆಣ್ಣು ಮಗುವೊಂದು 5 ರೂಪಾಯಿ ನಾಣ್ಯ ನುಂಗಿದ ಪರಿಣಾಮ ಚಿಕಿತ್ಸೆ ಫಲಕಾರಿಯಾದೇ ಸಾವನಪ್ಪಿದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ನಡೆದಿದೆ.


    ಮೃತಪಟ್ಟ ಮಗುವನ್ನು ಖುಷಿ (4) ಎಂದು ಗುರುತಿಸಲಾಗಿದೆ. ಹಿರಿಕ್ಯಾತನಹಳ್ಳಿಯ ಅಜ್ಜಿಯ ಮನೆಯಲ್ಲಿ ಖುಷಿ ಶುಕ್ರವಾರ ನಾಣ್ಯದೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ಆಕಸ್ಮಿಕವಾಗಿ ಆಕೆ ನಾಣ್ಯವನ್ನು ನುಂಗಿದ್ದಳು. ಈ ಬಗ್ಗೆ ತಿಳಿದ ಪೋಷಕರು ಮಗುವನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮಗು ಭಾನುವಾರ ಮೃತಪಟ್ಟಿದೆ.

    Share Information
    Advertisement
    Click to comment

    You must be logged in to post a comment Login

    Leave a Reply