Connect with us

LATEST NEWS

ಜಮ್ಮು ಕಾಶ್ಮೀರ – ಆಳ ಕಂದಕಕ್ಕೆ ಬಿದ್ದ ಸೇನಾ ವಾಹನ ಕುಂದಾಪುರದ ಯೋಧ ಅನೂಪ್ ಹುತಾತ್ಮ

ಜಮ್ಮು ಕಾಶ್ಮೀರ ಡಿಸೆಂಬರ್ 25: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಅಪಘಾತದಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದು, ಅದರಲ್ಲಿ ಕುಂದಾಪುರದ ಕೋಟೇಶ್ವರ ಯೋಧ ಅನೂಪ್ ಹುತಾತ್ಮರಾಗಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನವು ಆಳವಾದ ಕಂದಕಕ್ಕೆ ಉರುಳಿದ್ದು , ಘಟನೆಯಲ್ಲಿ ಐವರು ಸೈನಿಕರು ಸಾವನ್ನಪ್ಪಿದ್ದಾರೆ ಮತ್ತು 5 ಮಂದಿ ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ 18 ಯೋಧರು ವಾಹನದಲ್ಲಿದ್ದರು ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಘರೋವಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ.
ನಿಲಂ ಪ್ರಧಾನ ಕಛೇರಿಯಿಂದ ಎಲ್‌ಒಸಿ ಮೂಲಕ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿದ್ದ 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ಅಪಘಾತಕ್ಕೀಡಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಆ ವಾಹನವು ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದ್ದು, ಚಾಲಕ ಸೇರಿದಂತೆ 5 ಸೈನಿಕರಿಗೆ ಗಂಭೀರ ಗಾಯಗಳಾಗಿವೆ.


ಈ ಘಟನೆಯಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು. ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

ಅನೂಪ್ ಕುಟುಂಬಕ್ಕೆ ಸೇನಾಧಿಕಾರಿಗಳಿಂದ ಮಾಹಿತಿ ಲಭ್ಯವಾಗಿದೆ. ಕಳೆದ 13 ವರ್ಷಗಳಿಂದ ಅನೂಪ್ ಸೇನೆಯಲ್ಲಿದ್ದು 2 ವರ್ಷದ ಹಿಂದೆ ವಿವಾಹವಾಗಿತ್ತು. ದಂಪತಿಗೆ 1 ವರ್ಷದ ಮಗುವಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸರಿಗೂ ಸೇನೆಯಿಂದ ಮಾಹಿತಿ ಕಳುಹಿಸಲಾಗಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *