Connect with us

KARNATAKA

ಇಂದಿನಿಂದ ರಾಜ್ಯದ ಚಿತ್ರಮಂದಿರಗಳಲ್ಲಿ ಶೇ.50 ರ ಮಿತಿ ಜಾರಿ

ಬೆಂಗಳೂರು, ಎಪ್ರಿಲ್ 08 : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳದ ಹಿನ್ನೆಲೆಯಲ್ಲಿ ಚಿತ್ರಮಂದಿರಗಳಲ್ಲಿ ಇಂದಿನಿಂದ ಶೇ. 50 ರಷ್ಟು ಆಸನ ಮಿತಿ ಜಾರಿಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಚಿತ್ರಮಂದಿರಗಳಲ್ಲಿ ಏಪ್ರಿಲ್ 7 ರವರೆಗೆ ಶೇ. 100 ರಷ್ಟು ಆಸನ ಭರ್ತಿ ಅವಕಾಶದ ಗಡುವು ನೀಡಲಾಗಿತ್ತು. ಪ್ರಸ್ತುತ ಜಾರಿಯಲ್ಲಿರುವ ಮಾರ್ಗಸೂಚಿ ಎಲ್ಲರಿಗೂ ಅನ್ವಯವಾಗಲಿದೆ ಎಂದು ಅವರು ಸ್ಪಷ್ಪಡಿಸಿದ್ದಾರೆ.

ಇನ್ನು ಆರೋಗ್ಯ ಇಲಾಖೆಯ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾರ್ಗಸೂಚಿ ಪಾಲನೆಯಾಗದಿರುವ ಬಗ್ಗೆ ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದಾರೆ.

Advertisement
Click to comment

You must be logged in to post a comment Login

Leave a Reply