Connect with us

    LATEST NEWS

    ಮತ್ತೆ ರಾಜಕೀಯ ಹಿಂಸಾಚಾರದತ್ತ ಪಾಕಿಸ್ತಾನ -ಪಾಕಿಸ್ತಾನ ಸೇನೆಯಿಂದ ಶೂಟ್ ಅಟ್ ಸೈಟ್ ಆದೇಶ

    ಇಸ್ಲಾಮಾಬಾದ್ ನವೆಂಬರ್ 26: ಪಾಕಿಸ್ತಾನದಲ್ಲಿ ಮತ್ತೆ ರಾಜಕೀಯ ಹಿಂಸಾಚಾರ ಭುಗಿಲೆದ್ದಿದ್ದು, ಇದೀಗ ಇಮ್ರಾನ್ ಖಾನ್ ಬೆಂಬಲಿಗರು ಮತ್ತು ಪಾಕಿಸ್ತಾನ ಸೇನೆ ನಡುವೆ ಕಲಹ ಪ್ರಾರಂಭವಾಗಿದ್ದು, ಇದೀಗ ಪಾಕಿಸ್ತಾನ ಸೇನೆ ಶೂಟ್ ಅಟ್ ಸೈಟ್ ಆದೇಶ ಕೊಟ್ಟಿದೆ.


    ಪಾಕಿಸ್ತಾನದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಬಿಡುಗಡೆಗೆ ಒತ್ತಾಯಿಸಿ ಪ್ರತಿಭಟನಾಕಾರರು ಸೋಮವಾರ ತಡರಾತ್ರಿ ರಾಜಧಾನಿ ಇಸ್ಲಾಮಾಬಾದ್‌ಗೆ ಪ್ರವೇಶಿಸಿದಾಗ ಹಿಂಸಾಚಾರ ಭುಗಿಲೆದ್ದಿತು.
    ಪಾಕಿಸ್ತಾನದಾದ್ಯಂತ ಈ ಪ್ರತಿಭಟನೆ ನಡೆದಿದ್ದು, ಈ ವೇಳೆ ಪೊಲೀಸರು ಮತ್ತು ಪಿಟಿಐ ಕಾರ್ಯಕರ್ತರ ನಡುವೆ ಸಂಭವಿಸಿದ ಘರ್ಷಣೆಯಲ್ಲಿ ಕನಿಷ್ಠ ಐದು ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
    ವರದಿಗಳ ಪ್ರಕಾರ, ಪ್ರತಿಭಟನಾಕಾರರೊಂದಿಗಿನ ಘರ್ಷಣೆಯಲ್ಲಿ ನಾಲ್ವರು ಸೈನಿಕರು ಮತ್ತು ಕನಿಷ್ಠ ಒಬ್ಬ ಪ್ರತಿಭಟನಾಕಾರರು ಸಾವನ್ನಪ್ಪಿದ್ದು, ಈ ಬೆಳವಣಿಗೆಯ ಹಿನ್ನಲೆಯಲ್ಲಿ ಪಾಕಿಸ್ತಾನ ಸೇನೆ ಶೂಟ್ ಅಟ್ ಸೈಟ್ (ಗಂಡಲ್ಲಿ ಗುಂಡು) ಆದೇಶ ನೀಡಿದೆ. ರಾಷ್ಟ್ರವ್ಯಾಪಿ ನಡೆಯುತ್ತಿರುವ ಪ್ರತಿಭಟನೆಗಳನ್ನು ನಿಗ್ರಹಿಸಲು ಪ್ರಧಾನಿ ಶೆಹಬಾಜ್ ಷರೀಫ್ ಅವರ ಸರ್ಕಾರ ನಿರಂತರ ಪ್ರಯತ್ನ ನಡೆಸಿದೆ.


    ಭದ್ರತೆಗಾಗಿ ಆರ್ಟಿಕಲ್ 245 ರ ಅಡಿಯಲ್ಲಿ ಸೈನ್ಯವನ್ನು ನಿಯೋಜಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಪಾಲನೆಗಾಗಿ ‘ಕಂಡಲ್ಲಿ ಗುಂಡು’ ಆದೇಶ ನೀಡಲಾಗಿದೆ. ಈ ವರೆಗೂ 5 ಮಂದಿ ಸಾವಿಗೀಡಾಗಿ 119ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ

    Share Information
    Advertisement
    Click to comment

    Leave a Reply

    Your email address will not be published. Required fields are marked *