Connect with us

BELTHANGADI

ಮುಂಡಾಜೆಯಲ್ಲಿ 6 ಮಂಗಗಳ ಮೃತದೇಹ ಪತ್ತೆ…ಮಂಗನ ಕಾಯಿಲೆಯ ಅತಂಕ..!?

ಬೆಳ್ತಂಗಡಿ, ಮಾರ್ಚ್ 12 : ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಯರ್ತೋಡಿ ರಸ್ತೆಯ ಸೀಟ್ ಬಳಿ ರಕ್ಷಿತಾರಣ್ಯ ಪ್ರದೇಶದ ರಸ್ತೆ ಬದಿಯಲ್ಲಿ ಆರು ಮಂಗಗಳ ಮೃತದೇಹ ಪತ್ತೆಯಾಗಿದೆ.

ಈಗಾಗಲೇ ಹಲವು ಕಡೆಗಳಲ್ಲಿ ಮಂಗನ ಕಾಯಿಲೆಯ ಅತಂಕ ಇರುವುದರಿಂದ, ಈ ರೀತಿ ರಸ್ತೆ ಬದಿ ಮೃತ ದೇಹಗಳು ಪತ್ತೆಯಾಗುತ್ತಿರುವುದರಿಂದ ಎಂದು ಜನರು ಗಾಬರಿಗೊಂಡಿದ್ದಾರೆ. ಮಂಗಗಳ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಸ್ತೆಯ ಬದಿಯಲ್ಲಿ ಬಿದ್ದಿದ್ದ ವಿಷ ಪದಾರ್ಥ ಸೇವಿಸಿದೆಯಾ, ಅಥವಾ ಯಾರಾದರೂ ಉದ್ದೇಶಪೂರ್ವಕವಾಗಿ ವಿಷವಿಕ್ಕಿದ್ದಾರೆಯೇ ಎಂಬುದು ತನಿಖೆ ಮೂಲಕ ತಿಳಿದು ಬರಬೇಕಾಗಿದೆ.

ಈಗಾಗಲೇ ಅರಣ್ಯ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಂಚಾಯಿತಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಬಂದ ನಂತರವೇ ಹೆಚ್ಚಿನ ಮಾಹಿತಿ ತಿಳಿಯಲಿದೆ.