Connect with us

    BANTWAL

    ಬಂಟ್ವಾಳ – ಜ್ವರದಿಂದ ಬಳಲುತ್ತಿದ್ದ 6 ವರ್ಷದ ಬಾಲಕಿ ಸಾವು

    ಬಂಟ್ವಾಳ ಜೂನ್ 23 : ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿರುವ ಘಚನೆ ಕಲ್ಲಡ್ಕದಲ್ಲಿ ನಡೆದಿದೆ.


    ಮೃತ ಬಾಲಕಿ ಹನುಮಾನ್ ನಗರ ನಿವಾಸಿ ರವಿ ಆಚಾರ್ಯ ಎಂಬವರ ಪುತ್ರಿ ಆರಾಧ್ಯ ಆಚಾರ್ಯ(6). ಆರಾಧ್ಯ ಆಚಾರ್ಯ ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿದ್ದು, ಕಳೆದ ಒಂದು ವಾರದಿಂದ ಜ್ವರದಿಂದ ಬಳಲುತ್ತಿದ್ದಳು, ಈಕೆಗೆ ಸ್ಥಳೀಯ ವೈದ್ಯರಲ್ಲಿ ಚಿಕಿತ್ಸೆ ನೀಡಲಾಗಿತ್ತು.‌ ಆದರೆ ಎರಡು ದಿನಗಳ ಹಿಂದೆ ಜ್ವರ ಏಕಾಏಕಿ ಉಲ್ಬಣಿಸಿದ್ದು,ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾಳೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *