Connect with us

LATEST NEWS

40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ಮಂದಿಗೆ ನೋಟಿಸ್‌: ವಾಣಿಜ್ಯ ತೆರಿಗೆ ಇಲಾಖೆ

ಬೆಂಗಳೂರು, ಜುಲೈ 17: 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ರೂ. ಮಂದಿಗೆ ನೋಟಿಸ್‌ ನೀಡಿದ್ದೇವೆ ಎಂದು ಕರ್ನಾಟಕ ಸರ್ಕಾರ ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತ ಚಂದ್ರಶೇಖರ್ ನಾಯಕ್ ಹೇಳಿದ್ದಾರೆ.

ಬೇಕರಿ, ಕಾಂಡಿಮೆಂಟ್ಸ್‌, ಟೀ- ತರಕಾರಿ ಅಂಗಡಿಯವರಿಗೆ ಲಕ್ಷಲಕ್ಷ ತೆರಿಗೆ ಬಾಕಿ ನೋಟಿಸ್ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, 40 ಸಾವಿರ ಯುಪಿಐ (UPI) ದಾಖಲೆಯನ್ನು ಕಲೆ ಹಾಕಿ ಅದರಲ್ಲಿ 40 ಲಕ್ಷ ವಹಿವಾಟು ದಾಟಿದ ಆರು ಸಾವಿರ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿಸಿದರು.

ಹಾಲು, ಬ್ರೆಡ್ ಮಾರಾಟ, ತರಕಾರಿ ಮಾರಾಟದ ಬಗ್ಗೆ ದಾಖಲೆ ನೀಡಿದರೆ ಖಂಡಿತ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಉಳಿದಂತೆ 40 ಲಕ್ಷ ರೂ. ವಹಿವಾಟು ಹೆಚ್ಚಾದರೆ ವಾರ್ಷಿಕವಾಗಿ ಜಿಎಸ್‌ಟಿ ನೋಂದಣಿ ಮಾಡಿಕೊಳ್ಳಬೇಕು. ಕಂಪೋಸಿಷನ್ ಟ್ಯಾಕ್ಸ್‌ ಅಡಿ 1% ಕೂಡ ಕಟ್ಟುವ ಅವಕಾಶ ಇದೆ ಎಂದು ತಿಳಿಸಿದರು.

ಕಳೆದ 2021 ರಿಂದ 2024 ವರೆಗೆ ಪ್ರತಿ ವರ್ಷ 40 ಲಕ್ಷ ರೂ.ಗಿಂತ ಹೆಚ್ಚಿನ ವ್ಯಾಪಾರ ವಹಿವಾಟು ನಡೆಸಿದವರಿಗೆ ಮಾತ್ರ ನೋಟಿಸ್ ‌ ನೀಡಲಾಗಿದೆ. ಬ್ಯಾಂಕ್‌ ದಾಖಲೆಗಳ ಆಧಾರದಲ್ಲಿ ನೋಟಿಸ್‌ ನೀಡಲಾಗಿದೆ ಎಂದು ಹೇಳಿದರು.

ಹೂ, ಹಣ್ಣು, ಹಾಲು ಸೇರಿ ಮೊದಲಾದವು ಜಿಎಸ್‌ಟಿಯಿಂದ ಹೊರಗಡೆ ಇದೆ. ಇವರಿಗೆ ನೋಟಿಸ್‌ ಬಂದಿದ್ದರೆ ಆ ವ್ಯಾಪಾರಿಗಳು ಸ್ಪಷ್ಟೀಕರಣ ನೀಡಬಹುದು. ಸರಕು ಖರೀದಿ ವೇಳೆ ಜಿಎಸ್‌ಟಿ ಪಾವತಿ ಮಾಡಿದ್ದರೆ ಮಾರಾಟದಲ್ಲಿ ಜಿಎಸ್‌ಟಿ ಪಾವತಿಸಬೇಕಾದ ಅವಶ್ಯಕತೆ ಇರುವುದಿಲ್ಲ. ಅದಕ್ಕೆ ಪೂರಕ ದಾಖಲೆಗಳನ್ನು ವಾಣಿಜ್ಯ ತೆರಿಗೆ ಇಲಾಖೆಗೆ ಸಲ್ಲಿಸಬೇಕಾಗುತ್ತದೆ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *