Connect with us

    FILM

    68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ , ಜೀಟಿಗೆ ಸಿನಿಮಾಗಳಿಗೆ ರಾಷ್ಟ್ರ ಗರಿ

    ನವದೆಹಲಿ, ಜುಲೈ 23: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಸಿನಿಮಾಗಳಿಗೂ ಹಲವು ಪ್ರಶಸ್ತಿಗಳು ಸಂದಿವೆ.

    ಈಗಾಗಲೇ ಸಾಕಷ್ಟು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಸಾಗರ್ ಪುರಾಣಿಕ್ ನಿರ್ದೇಶನದ, ಪವನ್ ಒಡೆಯರ್ ನಿರ್ಮಾಣದ ಡೊಳ್ಳು ಚಿತ್ರಕ್ಕೆ ಎರಡು ಪ್ರಶಸ್ತಿಗಳು ಸಂದಿದ್ದು, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಸಿನಿಮಾಗೂ ರಾಷ್ಟ್ರ ಪ್ರಶಸ್ತಿ ಸಂದಿದೆ. ಅಲ್ಲದೇ, ಗಿರೀಶ್ ಕಾಸರವಳ್ಳಿ ನಿರ್ದೇಶನದ, ವಾರ್ತಾ ಇಲಾಖೆ ನಿರ್ಮಿಸಿರುವ ಡಾ.ಪಿ.ಟಿ ವೆಂಕೇಶ್ ಕುಮಾರ್ ಬದುಕಿನ ‘ನಾದದ ನವನೀತ’ ಚಿತ್ರಕ್ಕೂ ರಾಷ್ಟ್ರೀಯ ಪ್ರಶಸ್ತಿ ಸಂದಿದೆ.

    ಅತ್ಯುತ್ತಮ ಪರಿಸರ ಕಾಳಜಿ ಚಿತ್ರವಾಗಿ ಕೃಪಾಕರ್ ನಿರ್ದೇಶನದ, ಸಂಚಾರಿ ವಿಜಯ್ ನಟನೆಯ ‘ತಲೆದಂಡ’ ಚಿತ್ರ ರಾಷ್ಟ್ರೀಯ ಪ್ರಶಸ್ತಿ ದೊರೆತರೆ,

    ಲೋಕೇಷನ್ ಸೌಂಡ್ ಡಿಸೈನಿಂಗ್ ವಿಭಾಗದಲ್ಲಿ ಡೊಳ್ಳು ಸಿನಿಮಾ ಪ್ರಶಸ್ತಿ ಪಡೆದುಕೊಂಡಿದೆ. ಅತ್ಯುತ್ತಮ ಪ್ರಾದೇಶಿಕ ಚಿತ್ರ ಡೊಳ್ಳು ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡರೆ,

    ಅತ್ಯುತ್ತಮ ಪ್ರಾದೇಶಿಕ ತುಳು ಸಿನಿಮಾ ಪ್ರಶಸ್ತಿಯು ಸಂತೋಷ್ ನಿರ್ದೇಶನದ ‘ಜೀಟಿಗೆ’ ದೊರೆತಿದೆ. ಕಲೆ ಮತ್ತು ಸಾಂಸ್ಕೃತಿಕ ಚಿತ್ರವಾಗಿ ಗಿರೀಶ್ ಕಾಸರವಳ್ಳಿ ನಿರ್ದೇಶನ ಮಾಡಿರುವ ‘ನಾದದ ನವನೀತ’ ಚಿತ್ರಕ್ಕೆ ಪ್ರಶಸ್ತಿ ಸಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply