ರಾಜ್ಯದಲ್ಲಿ 6 ನೇ ಬಲಿ ಪಡೆದ ಕೊರೊನಾ

ಗದಗ ಎಪ್ರಿಲ್ 9: ರಾಜ್ಯದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಗದಗದಲ್ಲಿ ಕೊರೊನಾ ತನ್ನ 6 ನೇ ಬಲಿ ಪಡೆದುಕೊಂಡಿದೆ. ಏಪ್ರಿಲ್ 4ರಂದು ಗದಗನ ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 80 ವರ್ಷದ ವೃದ್ಧೆ ಕೊರೊನಾಗೆ ಸಾವನ್ನಪ್ಪಿದ್ದಾರೆ. ವೃದ್ಧೆಗೆ ಏಪ್ರಿಲ್ 7ರಂದು ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.

ಇದೀಗ ಗದಗ ನಗರದ ನಿವಾಸಿಯಾಗಿದ್ದ ರೋಗಿ ನಂಬರ್ 166 ಸಾವನ್ನಪ್ಪಿದ್ದಾರೆ. ಈ ಕುರಿತು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 181 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಂದು ಸಾವನ್ನಪ್ಪಿದ ವೃದ್ಧೆ ಸೇರಿ ಒಟ್ಟು 6 ಜನ ಸಾವನ್ನಪ್ಪಿದ್ದಾರೆ. ಗದಗ ನಗರವನ್ನು ಸಂಪೂರ್ಣವಾಗಿ ಲಾಕ್‍ಡೌನ್ ಮಾಡಲಾಗಿದೆ.