LATEST NEWS
ದೆಹಲಿ – ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ ಸುಟ್ಟು ಕರಕಲಾದ 7 ನವಜಾತ ಶಿಶುಗಳು

ನವದೆಹಲಿ ಮೇ 26 : ಗುಜರಾತ್ ನ ರಾಜಕೋಟ್ ನಲ್ಲಿ ನಡೆದ ಬೆಂಕಿ ಅವಘಡದಲ್ಲಿ 26 ಮಂದಿ ಸಾವನಪ್ಪಿದ ಘಟನೆಯ ಬೆನ್ನಲ್ಲೇ ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಸಂಭವಿಸಿ 6 ನವಜಾತ ಶಿಶುಗಳು ಬೆಂಕಿಗಾಹುತಿಯಾದ ಘಟನೆ ನಡೆದಿದೆ.
ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿನ ಬೇಬಿ ಕೇರ್ ಸೆಂಟರ್‌ನಲ್ಲಿ ರಾತ್ರಿ 11:32ಕ್ಕೆ ಬೆಂಕಿ ಕಾಣಿಸಿಕೊಂಡಿತ್ತು. 16 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಬಂದು ಭಾನುವಾರ ಮುಂಜಾನೆಯವರೆಗೂ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. 12 ನವಜಾತ ಶಿಶುಗಳನ್ನು ರಕ್ಷಿಸಲಾಗಿದೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಕಿ ಅನಾಹುತಕ್ಕೆ ನಿಖರ ಕಾರಣ ಏನು ಎನ್ನುವುದು ತಿಳಿದುಬಂದಿಲ್ಲ.
