Connect with us

KARNATAKA

ದಾವಣಗೆರೆ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವು

ದಾವಣಗೆರೆ ಜನವರಿ 14: ಬೆಳ್ಳಂಬೆಳಗ್ಗೆ ನಡೆದ ಭೀಕರ ರಸ್ತೆ ದುರಂತಕ್ಕೆ ಏಳು ಜನರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನಲ್ಲಿ ನಡೆದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರ ಕಾನನಕಟ್ಟೆ ಗ್ರಾಮದಲ್ಲಿ ಈ ರಸ್ತೆ ಅಪಘಾತ ಸಂಭವಿಸಿದೆ.

ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದ್ದು. ಘಟನೆಯಲ್ಲಿ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬ ವ್ಯಕ್ತಿ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು, ಮೃತರ ಕುರಿತು ವಿವರಗಳನ್ನು ಸಂಗ್ರಹಿಸುತ್ತಿದ್ದಾರೆ.
ಮೃತರು ಶಹಾಪುರದವರಾಗಿದ್ದು, ಬೆಂಗಳೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಎಸ್ಪಿ ಸಿ.ಬಿ.ರೈಷ್ಯಂತ್ ಮತ್ತು ಅವರ ತಂಡ ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement
Click to comment

You must be logged in to post a comment Login

Leave a Reply