Connect with us

LATEST NEWS

ತಮಿಳುನಾಡಿನಲ್ಲಿ ಭೀಕರ ರಸ್ತೆ ಅಪಘಾತ: ಬಸ್‌- ಟಾಟಾ ಸುಮೋ ಢಿಕ್ಕಿಯಲ್ಲಿ 7 ಮೃತ್ಯು..!

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್ ಹಾಗೂ ಟಾಟಾ ಸುಮೋ ಮುಖಾಮುಖಿ ಢಿಕ್ಕಿಯಾದ ಪರಿಣಾಮ 7 ಮಂದಿ ಸಾವನ್ನಪ್ಪಿದ್ರೆ, 14 ಜನ ಗಂಭೀರ ಗಾಯಗೊಂಡಿದ್ದಾರೆ.

ಬಸ್ ಬೆಂಗಳೂರಿನಿಂದ ತಿರುವಣ್ಣಾಮಲೈಗೆ ತೆರಳುತ್ತಿತ್ತು. ಕರುಮಂಕುಲಂ ಪ್ರದೇಶದಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿವೆ. ಇದರಿಂದ 7 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ 14 ಮಂದಿಯನ್ನು ಪೊಲೀಸರು ರಕ್ಷಿಸಿ ತಿರುವಣ್ಣಾಮಲೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ತಿರುವಣ್ಣಾಮಲೈ ಜಿಲ್ಲಾ ಪೊಲೀಸರು ಟಾಟಾ ಸುಮೋದಲ್ಲಿ ಬಂದ ಪ್ರಯಾಣಿಕರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದು, ಮೃತರ ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share Information
Advertisement
Click to comment

You must be logged in to post a comment Login

Leave a Reply