Connect with us

    FILM

    ಕಾಂತಾರ ಸಿನೆಮಾದ ಅತ್ಯುತ್ತಮ ನಟನೆಗೆ ರಿಷಬ್ ಶೆಟ್ಟಿಗೆ ಒಲಿದ ರಾಷ್ಟ್ರಪ್ರಶಸ್ತಿ

    ನವದೆಹಲಿ ಅಗಸ್ಟ್ 16: 70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ವಿಜೇತರನ್ನು ಶುಕ್ರವಾರ ಪ್ರಕಟಿಸಲಾಗಿದೆ. ಕನ್ನಡದ ಕಾಂತಾರ ಸಿನಿಮಾದಲ್ಲಿ ಅತ್ಯುತ್ತಮ ಅಭಿನಯಕ್ಕಾಗಿ ನಟ ರಿಷಭ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅತ್ಯುತ್ತಮ ಜನಪ್ರಿಯ ಹಾಗೂ ಮನರಂಜನಾ ಚಿತ್ರವಾಗಿ ಎರಡು ವಿಭಾಗದಲ್ಲಿ ‘ಕಾಂತಾರ’ ಪ್ರಶಸ್ತಿ ಬಾಚಿಕೊಂಡಿದೆ.


    ಅತ್ಯುತ್ತಮ ನಟರ ವಿಭಾಗದಲ್ಲಿ ಭಾರಿ ಸ್ಪರ್ಧೆ ಎರ್ಪಟ್ಟಿತು. ಅಂತಿಮವಾಗಿ ರಿಷಬ್ ಶೆಟ್ಟಿಗೆ ಅತ್ಯುತ್ತ ನಟ ಪ್ರಶಸ್ತಿ ಒಲಿದಿದೆ. ಇದೇ ವೇಳೆ ಯಶ್ ಅಭಿನಯದ ಕೆಜಿಎಪ್ 2 ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಚಿತ್ರ ಪ್ರಶಸ್ತಿ ಪಡೆದಿದೆ. ಅತ್ಯುತ್ತಮ ನಟರ ರೇಸ್‌ನಲ್ಲಿ ರಿಷಬ್ ಶೆಟ್ಟಿ ಹಾಗೂ ಮಲೆಯಾಳಂ ನಟ ಮಮ್ಮುಟ್ಟಿ ನಡುವೆ ಭಾರಿ ಸ್ಪರ್ಧೆ ಎರ್ಪಟ್ಟಿತ್ತು. ಬಾಲಿವುಡ್‌ನ 12th ಫೇಲ್ ಚಿತ್ರ ಸೇರಿದಂತೆ ಹಲವು ಚಿತ್ರಗಳ ನಡುವೆ ಸ್ಪರ್ಧೆ ಎರ್ಪಟ್ಟಿತು.

     

    Share Information
    Advertisement
    Click to comment

    You must be logged in to post a comment Login

    Leave a Reply