Connect with us

LATEST NEWS

ದಕ್ಷಿಣಕನ್ನಡದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ದಕ್ಷಿಣಕನ್ನಡದಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಮಂಗಳೂರು ಅಗಸ್ಟ್ 15: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದಕ್ಷಿಣಕನ್ನಡ ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರೋತ್ಸದ ಸಂದೇಶ ನೀಡಿದರು.

ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರು ಭಾರಿ ಮಳೆಯ ನಡುವೆಯೂ ಸಂಭ್ರಮದಿಂದ ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು, ಇಂದು ಬೆಳಿಗ್ಗೆ ಮಳೆ ಸ್ವಲ್ಪ ವಿರಾಮ ನೀಡಿದ್ದರಿಂದ ಯಾವುದೇ ತೊಂದರೆ ಇಲ್ಲದೆ ಧ್ವಜಾರೋಹಣ ನೆರವೇರಿಸಲಾಯಿತು.

ಇದೇ ಸಂದರ್ಭದಲ್ಲಿ ಪೋಲೀಸ್ ಸೇರಿದಂತೆ ವಿವಿಧ ಇಲಾಖೆಗಳ ಹಾಗೂ ವಿದ್ಯಾರ್ಥಿಗಳ ಎನ್.ಸಿ.ಸಿ ಹಾಗೂ ಸ್ಕೌಟ್ ಅಂಡ್ ಗೈಡ್ಸ್ ಗಳ ಆಕರ್ಷಕ ಪಥ ಸಂಚಲನವೂ ನಡೆಯಿತು. ಅರಣ್ಯ ಇಲಾಖೆ ವತಿಯಿಂದ ಹಸಿರು ಕರ್ನಾಟಕ ಯೋಜನೆಯ ಪ್ರಯುಕ್ತ ಗಣ್ಯರಿಗೆ ಗಿಡ ನೀಡಿ ಚಾಲನೆ ನೀಡಲಾಯಿತು.

Advertisement
Click to comment

You must be logged in to post a comment Login

Leave a Reply