Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ 73 ಕೊರೊನಾ ಪಾಸಿಟಿವ್, 57ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

    ಮಂಗಳೂರು ಜುಲೈ15: ದಕ್ಷಿಣಕನ್ನಡದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು, ಇಂದು 73 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಜಿಲ್ಲೆಯಲ್ಲಿ ನಾಲ್ವರು ಕೊರೊನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ. ಇಂದಿನ 73 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 2525 ಕ್ಕೆ ಏರಿಕೆಯಾಗಿದೆ.


    ಇಂದು ದಾಖಲಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕದಲ್ಲಿ 11, 23 ILI, SARI 3, ಸಂಪರ್ಕ ಪತ್ತೆಯಾಗದ 32 ಮಂದಿ, ಅಂತರಾಷ್ಟ್ರೀಯ ಟ್ರಾವೆಲ್ ಹಿಸ್ಟರಿಯಿಂದ ಮೂವರಿಗೆ ಸೋಂಕು ತಗುಲಿದೆ. ಇಂದು ಜಿಲ್ಲೆಯಲ್ಲಿ 104 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 1379 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಜಿಲ್ಲೆಯಲ್ಲಿ 4 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದು, ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 57ಕ್ಕೆ ಏರಿಕೆಯಾಗಿದೆ.

    Share Information
    Advertisement
    Click to comment

    Leave a Reply

    Your email address will not be published. Required fields are marked *