LATEST NEWS
ಈಝೀ ಆಯುರ್ವೇದ ಆಸ್ಪತ್ರೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು :ನಗರದ ಈಝೀ ಆಯುರ್ವೇದ ಆಸ್ಪತ್ರೆಯಲ್ಲಿ 78 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿ ಮತ್ತು ಗೌರವದಿಂದ ಆಚರಿಸಲಾಯಿತು. ಈಝೀ ಆಯುರ್ವೇದದ ಹಿರಿಯ ವಿಷಯ ನಿರ್ವಾಹಕರಾದ ಡಾ.ರಘುರಾಮ ಶಾಸ್ತ್ರಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.
ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಜನಾರ್ಧನ ವಿ.ಹೆಬ್ಬಾರ್ ರಾಷ್ಟ್ರಧ್ವಜಾರೋಹಣ ಮಾಡುವುದರೊಂದಿಗೆ ಸಮಾರಂಭವನ್ನು ಆರಂಭಿಸಲಾಯಿತು. ತ್ರಿವರ್ಣ ಧ್ವಜಾರೋಹಣವಾಗುತ್ತಿದ್ದಂತೆ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಗೌರವವನ್ನು ಸಲ್ಲಿಸಲಾಯಿತು.
ರಾಷ್ಟ್ರಗೀತೆಯ ನಂತರ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧಿಕಾರಿ ಡಾ. ರವಿಗಣೇಶ್ ಮೊಗ್ರ ಭಾರತದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಬಲಿದಾನದ ಪ್ರಾಮುಖ್ಯತೆ ಹಾಗೂ ಸ್ವಾತಂತ್ರ್ಯದ ಮೌಲ್ಯದ ಬಗ್ಗೆ ಮಾತನಾಡಿದರು.
ಡಾ.ಹೆಬ್ಬಾರ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಸ್ವಾತಂತ್ರ್ಯದ ಮಹತ್ವ ಮತ್ತು ಆಯಾ ಕ್ಷೇತ್ರಗಳಲ್ಲಿ ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವ ಮಹತ್ವವನ್ನು ಒತ್ತಿ ಹೇಳಿದರು. ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು, ರೋಗಿಗಳು ಮತ್ತು ಪ್ರಸ್ತುತ ಆಸ್ಪತ್ರೆಯಲ್ಲಿ ತರಬೇತಿ ಪಡೆಯುತ್ತಿರುವ ೧೧ ದೇಶಗಳ ಆಯುರ್ವೇದ ವಿದ್ಯಾರ್ಥಿಗಳು ಭಾಗವಹಿಸಿದರು.
ಡಾ. ರಘುರಾಮ ಶಾಸ್ತ್ರಿಯವರು ಧನ್ಯವಾದ ಸಲ್ಲಿಸುವುದರೊಂದಿಗೆ ಕಾರ್ಯಕ್ರಮವು ಮುಕ್ತಾಯವಾಯಿತು. ಕಾರ್ಯಕ್ರಮದ ನಂತರ ಸಿಹಿತಿಂಡಿಯನ್ನು ವಿತರಿಸಲಾಯಿತು.
You must be logged in to post a comment Login