Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಶತಕ ದಾಟಿದ ಕೊರೊನಾ ಬಲಿ…

    ಮಂಗಳೂರು ಜುಲೈ24: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ದಿನದಿಂದ ದಿನಕ್ಕೆ ಏರಿಕೆಯಾಗುತ್ಲೆ ಇದ್ದು, ಇಂದು ಮತ್ತೆ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಬಲಿ ಶತಕ ದಾಟಿದೆ.


    ಇನ್ನು ಜಿಲ್ಲೆಯಲ್ಲಿ ಇಂದು ಮತ್ತೆ 180 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 180  ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 4394 ಕ್ಕೆ ಏರಿಕೆಯಾಗಿದೆ. ಇಂದು ಪತ್ತೆಯಾದ ಪ್ರಕರಣಗಳಲ್ಲಿ ಪ್ರಾಥಮಿಕ ಸಂಪರ್ಕ – 56, ILI – 68, SARI – 10, ವಿದೇಶ ಪ್ರವಾಸ – 1, ಸಂಪರ್ಕ ಪತ್ತೆಯಾಗದ – 45 ಪ್ರಕರಣಗಳಿವೆ. ಇಂದು ಜಿಲ್ಲೆಯಲ್ಲಿ 125 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2300 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply