UDUPI
ಉಡುಪಿ 84 ಮಂದಿಗೆ ಕೊರೊನಾ ಸೊಂಕು
ಉಡುಪಿ ಜುಲೈ 17: ಉಡುಪಿ ಜಿಲ್ಲೆಯಲ್ಲಿ ಇಂದು ಮತ್ತೆ 84 ಜನರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದ್ದು, ಒಟ್ಟು ಕೊರೊನಾ ಸೊಂಕಿತರ ಸಂಖ್ಯೆ 2 ಸಾವಿರದ ಗಡಿ ಹತ್ತಿರ ಬಂದು ನಿಂತಿದೆ. ಇಂದಿನ 84 ಪ್ರಕರಣಗಳೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1979ಕ್ಕೆ ಏರಿಕೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ 1543 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 439 ಸಕ್ರಿಯ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಇದುವರೆಗೆ ಏಳು ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
You must be logged in to post a comment Login