ಮಂಗಳೂರು : ಮಂಗಳೂರಿನಲ್ಲಿ ದಾವಣೆಗೆರೆ ಮೂಲದ ಪಿಜಿ ಮೆಡಿಕಲ್ ವಿಧ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ವಿಧ್ಯಾರ್ಥಿ ದಾವಣೆಗೆರೆ ಮೂಲದ ಪ್ರಸಾದ್ ಎಚ್.ಕೆ ಎಂದು ಗುರುತಿಸಲಾಗಿದ್ದು, ಆತ ಮಂಗಳೂರಿನ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನಲ್ಲಿ ಪೆಥೋಲಜಿ ತೃತೀಯ ವರ್ಷದ ಎಂಡಿ ವಿದ್ಯಾರ್ಥಿಯಾಗಿದ್ದ. ಹಾಸ್ಟೆಲ್ ಕೊಠಡಿಯಲ್ಲಿ ಒಬ್ಬನೇ ವಾಸಿಸುತ್ತಿದ್ದ ದಾವಣಗೆರೆ ಮೂಲದ ಪ್ರಸಾದ್, ಜುಲೈ 29 ರ ರಾತ್ರಿ ಬ್ಲೇಡಿನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ತೀವ್ರ ರಕ್ತಸ್ರಾವಕ್ಕೊಳಗಾಗಿ ಬಾತ್ ರೂಮ್ ನಲ್ಲಿ ಬಿದ್ದಿದ್ದ ಈತನನ್ನ ಕಾಲೇಜಿನ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪ್ರಸಾದ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ. ಈತನ ರೂಮ್ ನಲ್ಲಿ 9 ಪುಟಗಳ ಡೆತ್ ನೋಟ್ ಹಾಗೂ ಗೋಡೆಗೆ ಅಂಟಿಸಿರುವ ಚೆಕ್ ಪತ್ತೆಯಾಗಿದ್ದು, ಪಾಂಡೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Facebook Comments

comments