Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಾವಿರ ಗಡಿ ದಾಟಿದ ಸೊಂಕು…!!

    ಮಂಗಳೂರು ಜುಲೈ 3 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 1012ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 3 ಪ್ರಕರಣ ಅಂತರಾಷ್ಟ್ರೀಯ, 28 ಪ್ರಕರಣಗಳು ILI ಆಗಿದ್ದು, ಇನ್ನು 28 ಕೊರೊನಾ ಸೊಂಕಿತ ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದ್ದು, 25 ಮಂದಿಗೆ ಕೊರೊನಾ ಸೊಂಕು ರೋಗಿಯ ಪ್ರಾಥಮಿಕ ಸಂಪರ್ಕದಿಂದ ಬಂದಿದೆ.


    ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಬ್ಬರು ಕೊರೊನಾದಿಂದ ಮೃತಪಟ್ಟರೆ, 51 ಮಂದಿ ಗುಣಮಖವಾಗಿ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 487 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 507 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 19 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply