Connect with us

    LATEST NEWS

    ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇ ದಿನ 97 ಕೊರೊನಾ ಪ್ರಕರಣ ದಾಖಲು

    28 ಪ್ರಕರಣದ ಮೂಲ ಪತ್ತೆ ಹಚ್ಚಲಾಗುತ್ತಿದೆ.

    ಮಂಗಳೂರು ಜೂನ್ 28: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 97 ಕೊರೊನಾ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾ ಸೊಂಕಿತರ ಸಂಖ್ಯೆ 665ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ 32 ಪ್ರಕರಣಗಳು ಸೌದಿ ಅರೇಬಿಯಾ, ಕತಾರ್ ಮತ್ತು ಮಹಾರಾಷ್ಟ್ರದಿಂದ ಆಗಮಿಸಿದವರಾಗಿದ್ದು, 21 ಪ್ರಕರಣಗಳು ILI ಆಗಿದ್ದು, 5 SARI ಪ್ರಕರಣಗಳು, ಇನ್ನು 28 ಕೊರೊನಾ ಸೊಂಕಿತ ಪ್ರಕರಣಗಳ ಮೂಲ ಪತ್ತೆ ಹಚ್ಚಲಾಗುತ್ತಿದ್ದು, 10 ಕೊರೊನಾ ಪ್ರಕರಣಗಳು ಕೊರೊನಾ ರೋಗಿಯ ಪ್ರಾಥಮಿಕ ಸಂಪರ್ಕದಿಂದ ಬಂದಿದೆ.


    ಇಂದು ದಕ್ಷಿಣಕನ್ನಡ ಜಿಲ್ಲೆಯಲ್ಲಿ 6 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 422 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸದ್ಯ 238 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 13 ಮಂದಿ ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply