Connect with us

BANTWAL

ಮನೆಯಲ್ಲಿ ಬೈದಿದ್ದಕ್ಕೆ ನೇಣಿಗೆ ಶರಣಾದ ಬಾಲಕ

ಬಂಟ್ವಾಳ: ಮನೆಯಲ್ಲಿ ಬೈದರು ಎಂಬ ಕಾರಣಕ್ಕೆ 9ನೇ ತರಗತಿ ವಿಧ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಶಂಭೂರು ಸರ್ಕಾರಿ ಪ್ರೌಢಶಾಲೆಯ 9ನೇ ತರಗತಿ ಕಲಿಯುತ್ತಿರುವ ಬಾಳ್ತಿಲ ಗ್ರಾಮದ ಚೆರ್ಕಳದ ನಿವಾಸಿ ಹರ್ಷಿತ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ.


ಜಾತ್ರೆಯಿಂದ ಮನೆಗೆ ತಡವಾಗಿ ಬಂದಿರುವುದಲ್ಲದೆ ತಂಗಿಗೆ ಐಸ್‌ಕ್ರೀಂ ತಂದಿರಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲಿ ಬೈದಿದ್ದರು. ಇದರಿಂದ ನೊಂದ ಬಾಲಕ ಕೊಠಡಿಯಲ್ಲಿ ನೇಣು ಹಾಕಿಕೊಂಡಿದ್ದಾನೆ. ಈತ ಈ ಹಿಂದೆಯೂ 2 ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಎನ್ನಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.