ಬೆಂಗಳೂರು : ‘ಬಿಗ್ ಬಾಸ್’ ಶೋ ಬಂದ್ ಮಾಡಿಸಿದ್ದರ ಹಿಂದೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕೈವಾಡ ಇದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.

‘ಬಿಗ್ ಬಾಸ್’ ರಿಯಾಲಿಟಿ ಶೋ ಬಂದ್ ಮಾಡಿಸಿ ಕಲಾವಿದರ ಮೇಲೆ ನಟ್ಟು ಬೋಲ್ಕು ಮಿನಿಸ್ಟರ್ ಡಿ.ಕೆ.ಶಿವಕುಮಾರ್ ಸೇಡು ತೀರಿಸಿಕೊಂಡಿದ್ದಾರೆ ಎಂದು ಜೆಡಿಎಸ್ ಆರೋಪಿಸಿ ಟ್ವೀಟ್ ಮಾಡಿದೆ. ಜಲ ಮಾಲಿನ್ಯ ಮತ್ತು ಅನಧಿಕೃತ ಕಾರ್ಯನಿರ್ವಹಣೆ ಆರೋಪದ ಮೇಲೆ ನಟ ಕಿಚ್ಚ ಸುದೀಪ್ ನಡೆಸಿಕೊಡುತ್ತಿದ್ದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ಗೆ ಜಿಲ್ಲಾಡಳಿತ ಮಂಗಳವಾರ ಸಂಜೆ ಬೀಗ ಹಾಕಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಜೆಡಿಎಸ್, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕಲಾವಿದರ ಮೇಲೆ ಸೇಡು ತೀರಿಸಿಕೊಂಡಿದ್ದಾರೆʼ ಎಂದು ಆರೋಪಿಸಿದೆ.
ಈ ಹಿಂದೆ ಡಿಕೆಶಿ ಅವರು ಕಾರ್ಯಕ್ರಮವೊಂದರಲ್ಲಿ ಕಲಾವಿದರ ಕುರಿತು ಮಾತನಾಡಿ, ʼಯಾರು ಯಾರಿಗೆ ನಟ್ಟು ಬೋಲ್ಟು ಟೈಟ್ ಮಾಡಬೇಕಿದೆ ಅನ್ನೋದು ನಮಗೆ ಗೊತ್ತಿದೆʼ ಅಂತಾ ಹೇಳಿದ್ದರು. ಅವರ ಈ ಹೇಳಿಕೆಯನ್ನ ಪ್ರಸ್ತಾಪಿಸಿ ಡಿಕೆಶಿ ವಿರುದ್ಧ ಜೆಡಿಎಸ್ ಗಂಭೀರ ಆರೋಪ ಮಾಡಿದೆ.