ಬೆಂಗಳೂರು: ಕನ್ನಡ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ-13’ರ ಅಧಿಕೃತ ಕೌಂಟ್ಡೌನ್ ಆರಂಭಗೊಂಡಿದೆ. ಕಾರ್ಯಕ್ರಮದ ನಿರೂಪಕ, ನಟ ಕಿಚ್ಚ ಸುದೀಪ್ ಅಭಿನಯದ ಮೊದಲ ಲಾಂಚ್ ಪ್ರೋಮೋ ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.

ಬಿಡುಗಡೆಯಾಗಿರುವ ಪ್ರೋಮೋದಲ್ಲಿ ‘ನಮಸ್ತೆ ಕರ್ನಾಟಕ, The Bigg Wait is Over!’ ಎಂಬ ಸಾಲಿನೊಂದಿಗೆ ಎಂಟ್ರಿ ನೀಡುವ ಕಿಚ್ಚ ಸುದೀಪ್, “ಕರ್ನಾಟಕದ ಜನ ಯಾವತ್ತೂ ಯಾರಿಗೂ ಕಾದಿದ್ದು ಚರಿತ್ರೆಯಲ್ಲೇ ಇಲ್ಲ. ಆದರೆ ವರ್ಷಕ್ಕೆ ಒಂದು ಸಲ ಕಾಯ್ತಾರೆ. ಒಂದೇ ಮನೆ, ಒಂದು ಅವಕಾಶ, ಕೋಟಿ ಕನಸುಗಳು… ಮತ್ತೆ ಶುರು ಮಾಡೋಣ್ವಾ?” ಎಂದು ಪ್ರೇಕ್ಷಕರಲ್ಲಿ ರೋಮಾಂಚನ ಮೂಡಿಸಿದ್ದಾರೆ.

ಅಧಿಕೃತ ಮಾಹಿತಿಯಂತೆ, ‘ಬಿಗ್ ಬಾಸ್ ಕನ್ನಡ 13’ ಪ್ರಸಾರವು ಸೆಪ್ಟೆಂಬರ್ 5ರಿಂದ ಆರಂಭವಾಗಲಿದೆ. ಈ ಬಾರಿಯ ಮತ್ತೊಂದು ಪ್ರಮುಖ ಆಕರ್ಷಣೆಯೆಂದರೆ ಸಾಮಾನ್ಯ ಜನರಿಗೂ (Common Man) ದೊಡ್ಮನೆಗೆ ಪ್ರವೇಶಿಸಲು ಅವಕಾಶ ಕಲ್ಪಿಸಿರುವುದು. ಈಗಾಗಲೇ ಆಡಿಷನ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಲಾಂಚ್ ದಿನವೇ ಆಯ್ಕೆಯಾದ ಅಭ್ಯರ್ಥಿಗಳ ಹೆಸರು ಬಹಿರಂಗವಾಗಲಿದೆ. #BiggBossKannada13 ಹ್ಯಾಶ್ಟ್ಯಾಗ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ನಲ್ಲಿದೆ