Connect with us

LATEST NEWS

ಪಂಜಾಬ್ – ಸೇತುವೆ ಮೇಲಿಂದ ಚರಂಡಿಗೆ ಬಿದ್ದ ಬಸ್ 8 ಮಂದಿ ಸಾವು

ಪಂಜಾಬ್ ಡಿಸೆಂಬರ್ 27: ಖಾಸಗಿ ಬಸ್ ಒಂದು ಸೇತುವೆ ಮೇಲಿಂದ ಚರಂಡಿಗೆ ಬಿದ್ದ ಪರಿಣಾಮ 8 ಮಂದಿ ಸ್ಥಳದಲ್ಲೇ ಸಾವನಪ್ಪಿದ ಘಟನೆ ಪಂಜಾಬ್‌ನ ಬತಿಂಡಾದಲ್ಲಿ ನಡೆದಿದೆ.


ಸುಮಾರು 50 ಮಂದಿ ಇದ್ದ ಖಾಸಗಿ ಬಸ್ ಪಂಜಾಬ್‌ನ ಸರ್ದುಲ್‌ಗಢದಿಂದ ಬತಿಂಡಾಗೆ ತೆರಳುತ್ತಿತ್ತು. ಈ ವೇಳೆ ಜಿವಾನ್ ಸಿಂಗ್ ವಾಲಾ ಗ್ರಾಮದಲ್ಲಿ ಸೇತುವೆ ಮೇಲಿಂದ ಚರಂಡಿಗೆ ಬಿದ್ದಿದೆ. ಕೂಡಲೇ ಅಲ್ಲಿಯೇ ಇದ್ದ ಸ್ಥಳೀಯರು ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಜಿಲ್ಲಾಡಳಿತ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಅಪಘಾತದಲ್ಲಿ 8 ಜನ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *