Connect with us

  KARNATAKA

  ಸುರತ್ಕಲ್ -ಟಿಪ್ಪರ್ ಗೆ ಫಾರ್ಚುನರ್ ಕಾರು ಡಿಕ್ಕಿ – ಓರ್ವ ಸ್ಥಳದಲ್ಲೇ ಸಾವು…!!

  ಮಂಗಳೂರು : ಸೆಪ್ಟೆಂಬರ್ 30: : ಮಂಗಳೂರು ನಗರದ ಹೊರವಲಯದ ಸುರತ್ಕಲ್ ಹೊಸಬೆಟ್ಟು ಪೆಟ್ರೋಲ್ ಬಂಕ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಕಾರು -ಟಿಪ್ಪರ್ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

  ಶನಿವಾರ ಬೆಳಗ್ಗಿನ ಜಾವ ಸುಮಾರು 3.30 ಗಂಟೆಗೆ ಈ ಅಪಘಾತ ಸಂಭವಿಸಿದೆ.

  ತಮಿಳುನಾಡು ನೋಂದಣಿಯ ಕಾರು ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಟಿಪ್ಪರ್‌ಗೆ ಹಿಂದಿನಿಂದ ಬಡಿದಿ. ಪರಿಣಾಮ ಕಾರು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

  ಸಹ ಪ್ರಯಾಣಿಕ ಮೊಹಮ್ಮದ್ ಫಿಜಾನ್ ಅವರ ತಲೆಯ ಒಳ ಭಾಗಕ್ಕೆ ಗಂಭೀರವಾದ ಗಾಯವಾಗಿದ್ದು, ಮತ್ತೋರ್ವ ಪ್ರಯಾಣಿಕ ಅನಿರುದ್ ನಾಯರ್ ಅವರ ಹಣೆಯ ಮೇಲೆ ಗಾಯವಾಗಿದೆ.

  ಕಾರು ಚಾಲಕನ ನಿರ್ಲಕ್ಷ್ಯಮತ್ತು ವೇಗದ  ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  ಪೊಲೀಸರು ಸಾರ್ವಜನಿಕರ ಸಹಕಾರದಿಂದ ಎರಡು ಗಂಟೆಯ ಪರಿಶ್ರಮದಿಂದ ಕಾರಿನ ಒಳಗೆ ಇದ್ದವರನ್ನು ಹೊರತೆಗೆದಿದ್ದು ಗಂಭೀರ ಗಾಯಗೊಂಡವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

  ಸಂಚಾರಿ ಉತ್ತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

   

  Share Information
  Advertisement
  Click to comment

  You must be logged in to post a comment Login

  Leave a Reply