Connect with us

    BANTWAL

    ಹಿಂದೂ ಯುವತಿ,ಮುಸ್ಲಿಂ ಯುವಕನ ನಡುವೆ ಪ್ರೇಮ ಪ್ರಕರಣ: ಪ್ರೇಮಕ್ಕೆ ಸಹಕರಿಸಿದ 18 ವಿದ್ಯಾರ್ಥಿಗಳನ್ನು ಮನೆಯಲ್ಲೇ ಇರುವಂತೆ ಸೂಚಿಸಿದ ಕಾಲೇಜು ಆಡಳಿತ ಮಂಡಳಿ

    ವಿಟ್ಲ, ಡಿಸೆಂಬರ್ 14: ಖಾಸಗೀ ಪದವಿಪೂರ್ವ ಕಾಲೇಜಿನ ಹಿಂದು ಯುವತಿ ಹಾಗೂ ಮುಸ್ಲಿಂ ಯುವಕನ ನಡುವಿನ ಪ್ರೇಮ ಪ್ರಕರಣ ವಿಚಾರದಲ್ಲಿ ಸಹಕರಿಸಿದ ಹಾಗೂ ವಿವಾದ ಮಾಡಲು ಹೋದ ವಿದ್ಯಾರ್ಥಿಗಳನ್ನು ಪೋಷಕರ ಸಮ್ಮುಖದಲ್ಲಿ ಆಡಳಿತ ಮಂಡಳಿ ಮತ್ತು ಉಪನ್ಯಾಸಕರ ನಡೆವೆ ಮಾತುಕತೆ ನಡೆದು ಮುನ್ನೆಚ್ಚರಿಕೆ ದೃಷ್ಟಿಯಿಂದ ಸುಮಾರು 18 ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಲಾಗಿದೆ.

    ಕೆಲವು ಸಮಯದಿಂದ ಹಿಂದು ಯುವತಿ ಹಾಗೂ ಮುಸ್ಲಿಮ್ ಯುವಕನ ನಡುವೆ ಪ್ರೇಮ ಪ್ರಕರಣವಿದ್ದು, ಗಮನಕ್ಕೆ ಬಂದ ಕಾಲೇಜು ಆಡಳಿತ ವರ್ಗ ಪೊಷಕರನ್ನು ಕರೆಸಿ ವಿಷಯವನ್ನು ತಿಳಿಸಿತ್ತು. ಈ ಬಳಿಕ ಕೆಲವು ಸಮಯ ಯಾವುದೇ ಗೊಂದಲವಿಲ್ಲದೆ ನಡೆಯುತ್ತಿದ್ದ ಕಾಲೇಜು, ವಾರ್ಷಿಕೋತ್ಸವ ಸಮಯ ಮತ್ತೆ ಪ್ರೇಮ ಪ್ರಕರಣ ವಿಚಾರದಲ್ಲಿ ಚರ್ಚೆಗಳು ಆರಂಭವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಉಪನ್ಯಾಸಕರ ತಂಡ ತರಗತಿಯಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವ ಬಗ್ಗೆ ತಪಾಸಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ಹಿಂದು ಯುವತಿಯ ಕೈಯಲ್ಲಿ ಪ್ರೇಮ ಪತ್ರ ಪತ್ತೆಯಾಗಿತ್ತು. ಈ ದಿನ ಮುಸ್ಲಿಂ ಯುವಕ ಕಾಲೇಜಿಗೆ ಬಂದಿರಲಿಲ್ಲ. ಯುವತಿಯ ಪೊಷಕರಲ್ಲಿ ಮಾತುಕತೆ ನಡೆಸಿ ಮುನ್ನೆಚ್ಚರಿಕೆಯ ದೃಷ್ಟಿಯಿಂದ ಯುವತಿಯನ್ನು ಪರೀಕ್ಷೆಗೆ ಮಾತ್ರ ಆಗಮಿಸುವಂತೆ ಸೂಚನೆ ನೀಡಿದರು.

    ಮುಸ್ಲಿಂ ಯುವಕ ತರಗತಿಗೆ ಹಾಜರಾಗುತ್ತಿದ್ದಂತೆ ಉಪನ್ಯಾಸಕರುಗಳಿಗೆ ಮಾಹಿತಿ ನೀಡದೆ ಕೆಲವು ಹಿಂದು ಯುವಕರು ಗುಂಪು ಕಟ್ಟಿಕೊಂಡು ಹೋಗಿ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಮುಸ್ಲಿಂ ಯುವಕ ಹಾಗೂ ಆತನಿಗೆ ಸಹಕಾರ ಮಾಡಿದ 6ಮಂದಿ ಮುಸ್ಲಿಂ ಯುವಕ ಯುವತಿಯರನ್ನು ಹಾಗೂ ಗುಂಪು ಕಟ್ಟಿಕೊಂಡು ಪ್ರಶ್ನಿಸಲು ಹೋದ ಹಿಂದು ಯುವಕರನ್ನು ಪೋಷಕರ ಸಮ್ಮುಖದಲ್ಲಿ ವಿಚಾರಣೆ ನಡೆಸಿ ಪರೀಕ್ಷೆಗೆ ಮಾತ್ರ ಹಾಜರಾಗುವಂತೆ ಸೂಚಿಸಿ ಮನೆಗೆ ಕಳುಹಿಸಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ದಿಟ್ಟ ನಿರ್ಧಾರಕ್ಕೆ ಪ್ರಶಂಸೆಗಳು ಕೇಳಿ ಬರುತ್ತಿದೆ.

    Share Information
    Advertisement
    Click to comment

    You must be logged in to post a comment Login

    Leave a Reply