LATEST NEWS
ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿ ಚರಣ್ ಅರೆಸ್ಟ್

ಮಧ್ಯಪ್ರದೇಶ , ಡಿಸೆಂಬರ್ 30: ರಾಷ್ಟ್ರಪಿತ ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ನಾಥೂರಾಂ ಗೋಡ್ಸೆಯನ್ನು ಹೊಗಳಿದ ಆರೋಪದ ಅಡಿಯಲ್ಲಿ ಧಾರ್ಮಿಕ ಮುಖಂಡ ಕಾಳಿಚರಣ್ ಅಲಿಯಾಸ್ ಅಭಿಜಿತ್ ಸರಾಗ್ರನ್ನು ಮಧ್ಯಪ್ರದೇಶ ಖಜುರಾಹೋದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಡಿಸೆಂಬರ್ 26ರಂದು ನಡೆದ ಧಾರ್ಮಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ್ದ ಕಾಳಿ ಚರಣ್, ಗಾಂಧಿ ಹಂತಕ ನಾಥೂರಾಂ ಗೋಡ್ಸೆಯನ್ನು ಹಾಡಿ ಹೊಗಳಿದ್ದರು. ಧರ್ಮವನ್ನು ರಕ್ಷಿಸುವ ಸಲುವಾಗಿ ಕಟ್ಟಾ ಹಿಂದೂ ನಾಯಕನನ್ನು ಸರ್ಕಾರದ ಮುಖ್ಯಸ್ಥನನ್ನಾಗಿ ಆಯ್ಕೆ ಮಾಡಿ ಎಂದು ಹೇಳಿದ್ದರು.

ಕಾಳಿಚರಣ್ ಮಧ್ಯಪ್ರದೇಶದ ಖಜುರಾಹೊದಿಂದ 25 ಕಿಮೀ ದೂರದಲ್ಲಿರುವ ಬಾಗೇಶ್ವರ್ ಧಾಮ್ ಬಳಿ ಬಾಡಿಗೆ ವಸತಿಗೃಹದಲ್ಲಿ ತಂಗಿದ್ದರು. ಇಂದು ಮುಂಜಾನೆ 4 ಗಂಟೆಗೆ ರಾಯ್‌ಪುರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಕಾಳಿ ಚರಣ್ ವಿರುದ್ಧ ಐಪಿಸಿ ಸೆಕ್ಷನ್ 294,295 ಎ,298,505(2) ಸೇರಿದಂತೆ ವಿವಿಧ ಕಾಯ್ದೆಗಳ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.