Connect with us

    KARNATAKA

    ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಂದು – 20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್

    ಬೆಂಗಳೂರು ಸೆಪ್ಟೆಂಬರ್ 21: ಬೆಂಗಳೂರಿನಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಆರೋಪಿ ಪರಾರಿಯಾದ ಘಟನೆ ವೈಯಾಲಿಕಾವಲ್‌ನಲ್ಲಿ ನಡೆದಿದೆ.

    ವೈಯಾಲಿಕಾವಲ್‌ನ ಪೈಪ್‌ಲೈನ್‌ ರಸ್ತೆಯ ವೀರಣ್ಣ ಭವನದ ಬಳಿಯ ಮನೆಯಲ್ಲಿ ಕೃತ್ಯ ನಡೆದಿದೆ. ಮಹಾಲಕ್ಷ್ಮಿ (29) ಕೊಲೆಯಾದ ಮಹಿಳೆ. ವೈಯಾಲಿಕಾವಲ್‌ನ ಪೈಪ್‌ಲೈನ್‌ ರಸ್ತೆಯಲ್ಲಿ ಭೀಕರ ಹತ್ಯೆ ನಡೆದಿದೆ. ಮಹಿಳೆಯನ್ನು ಕೊಂದು ನಂತರ ಮೃತದೇಹವನ್ನು ಪೀಸ್ ಪೀಸ್ ಆಗಿ ಕತ್ತರಿಸಿ ಬಳಿಕ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಹತ್ಯೆ ಬಳಿಕ ಮಾಂಸದ ಗುಡ್ಡೆ ಮಾಡಿ ತರಕಾರಿ ಜೋಡಿಸುವಂತೆ ಮೃತದೇಹದ ಭಾಗಗಳನ್ನು ಫ್ರಿಡ್ಜ್‌ನಲ್ಲಿ ಇರಿಸಿ ಆರೋಪಿ ಎಸ್ಕೇಪ್ ಆಗಿದ್ದಾನೆ. 15 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಮಹಾಲಕ್ಷ್ಮಿ ಬೇರೆ ರಾಜ್ಯದವರಾಗಿದ್ದು, ಕರ್ನಾಟಕದಲ್ಲಿ ನೆಲೆಸಿದ್ದರು. ಗಂಡನಿಂದ ದೂರವಾಗಿದ್ದ ಮಹಾಲಕ್ಷ್ಮಿ ಒಬ್ಬಳೇ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆದರೆ ಪಿಕಪ್‌ ಡ್ರಾಪ್‌ ಎಂದು ಒಬ್ಬ ಯುವಕ ಆಕೆಯನ್ನು ಕರೆದೊಯ್ಯುತ್ತಿದ್ದ. ಹೀಗಾಗಿ ಆತನೇ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆಗಾಗಿ ತನಿಖೆ ಮುಂದುವರೆದಿದೆ

    Share Information
    Advertisement
    Click to comment

    You must be logged in to post a comment Login

    Leave a Reply