Connect with us

BANTWAL

ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಕಬ್ಬಿಣದ ರಾಡ್ ಸಾಗಿಸುತ್ತಿದ್ದ ಲಾರಿ ಪಲ್ಟಿ

ಬಂಟ್ವಾಳ, ಮಾರ್ಚ್ 12 : ಚಾಲಕನ ನಿಯಂತ್ರಣವನ್ನು ಕಳೆದುಕೊಂಡ ಲಾರಿಯೊಂದು ಪಲ್ಟಿಯಾದ ಘಟನೆ ಶುಕ್ರವಾಋ ಬೆಳಗ್ಗೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ನಡೆದಿದೆ.

ಕಬ್ಬಿಣದ ರಾಡ್​​​ಗಳನ್ನು ತುಂಬಿಸಿಕೊಂಡು ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಮಗುಚಿ ಬಿದ್ದಿದೆ. ಚಾಲಕನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಘಟನೆಯಲ್ಲಿ ಕಬ್ಬಿಣದ ರಾಡ್​ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದು ಸಂಚಾರಕ್ಕೆ ಅಡಚಣೆ ಉಂಟಾಯಿತು. ಕೆಲ ಕಾಲ ಈ ರಸ್ತೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬಳಿಕ ವಿಟ್ಲ ಪೊಲೀಸರು ಸ್ಥಳಕ್ಕಾಗಮಿಸಿ ಲಾರಿಯ ತೆರವು ಕಾರ್ಯ ನಡೆಸಿದರು.