KARNATAKA
ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿ: ತಪ್ಪಿದ ಬಾರಿ ಅನಾಹುತ

ಕಾರವಾರ, ಮಾರ್ಚ್ 25: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ-ಹಳಿಯಾಳ ರಸ್ತೆಯ ಆಲೂರು ಬಳಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆಗಿ ಮರಕ್ಕೆ ಡಿಕ್ಕಿಯಾದ ಘಟನೆ ಸಂಭವಿಸಿದೆ.
ನಿಪ್ಪಾಣಿಯಿಂದ ದಾಂಡೇಲಿಗೆ ತೆರಳುತ್ತಿದ್ದ, ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿ ಬ್ರೇಕ್ ಫೇಲ್ ಆದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಟ್ರಕ್ನಲ್ಲಿರುವ ಗ್ಯಾಸ್ ಸಿಲಿಂಡರ್‌ಗಳು ಸೋರಿಕೆಯಾಗಿಲ್ಲ.

ಅಷ್ಟಬಂಧ ಬ್ರಹ್ಮ ಕಲಶೋತ್ಸವಕ್ಕೆ ಸಿದ್ದಗೊಂಡ ಮಧೂರು ದೇಗುಲ
ಟ್ರಕ್ನ ಬಾಗಿಲು ಮುರಿದು ಚಾಲಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಚಾಲಕ ವಿನಾಯಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ದಾಂಡೇಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳು ಚಾಲಕ, ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಅಮ್ಮಿನಭಾವಿ ನಿವಾಸಿಯಾಗಿದ್ದಾರೆ. ಸ್ಥಳಕ್ಕೆ ದಾಂಡೇಲಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.