ಬೆಳ್ತಂಗಡಿ, ಜನವರಿ 10: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶುಕ್ರವಾರ ರಾತ್ರಿ ವೇಳೆ ಸಂಭವಿಸಿದೆ.
ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ.
ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ.



