KARNATAKA
ಮನೆಯಲ್ಲಿ ಕೂಡಿಹಾಕಿದ್ದಕ್ಕೆ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡ ವ್ಯಕ್ತಿ!

ಬೆಳಗಾವಿ, ಮಾರ್ಚ್ 29: ಬೆಳಗಾವಿಯ ಹಿಡಕಲ್ನಲ್ಲಿ ವ್ಯಕ್ತಿಯೊಬ್ಬರು, ಮನೆಯಲ್ಲಿ ಕೂಡಿ ಹಾಕಿದ್ದ ಕೋಪಕ್ಕೆ ತಮ್ಮದೇ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾರೆ. ಆದರೆ, ಆ ವ್ಯಕ್ತಿ ಕೇವಲ ಸಿಟ್ಟಿನಿಂದಷ್ಟೇ ಈ ಕೃತ್ಯ ಎಸಗಿಲ್ಲ. ಬದಲಿಗೆ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು ಎನ್ನಲಾಗಿದೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಿಡಕಲ್ನಲ್ಲಿ ಕೆಲ ದಿನಗಳ ಹಿಂದೆ ಮಾನಸಿಕ ಅಸ್ವಸ್ಥನಾಗಿದ್ದ ಕೆಂಪಣ್ಣ ಎಂಬವರನ್ನು ಮನೆಯಲ್ಲಿ ಕೂಡಿಹಾಕಲಾಗಿತ್ತು. ಕುಟುಂಬಸ್ಥರು ಅವರನ್ನು ಎಲ್ಲಿಗೂ ಹೋಗದಂತೆ ಸರಪಳಿಯಿಂದ ಕಟ್ಟಿ ಹಾಕಿದ್ದರು. ಇದರಿಂದ ಕೋಪಗೊಂಡ ಕೆಂಪಣ್ಣ ತನ್ನ ಮರ್ಮಾಂಗ ಕಟ್ ಮಾಡಿಕೊಂಡಿದ್ದಾರೆ.

ಕೆಂಪಣ್ಣ ಮಾನಸಿಕ ಅಸ್ವಸ್ಥನಾಗಿದ್ದಕ್ಕೆ ಕಟ್ಟಿ ಹಾಕಿದ್ದಾಗಿ ಕುಟುಂಬಸ್ಥರು ಹೇಳಿದ್ದಾರೆ. ಸದ್ಯ ಕೆಂಪಣ್ಣರನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಯಮಕನಮರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ವಿದ್ಯಮಾನ ನಡೆದಿದೆ.
1 Comment