ಬೆಂಗಳೂರು, ನವೆಂಬರ್​ 12: ಮಾತು ಬಾರದ ವಿಶೇಷ ಯುವತಿಯ ಮೇಲೆ ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ವಿಘ್ನೇಶ್ ಅಲಿಯಾಸ್​​ ದಾಡು ಎಂದು ಗುರುತಿಸಲಾಗಿದ್ದು, ಸ್ಥಳೀಯರು ಆರೋಪಿಯನ್ನು ಹಿಡಿದು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಆರೋಪಿ ಅತ್ಯಾಚಾರಕ್ಕೆ ಯತ್ನಿಸಿದ್ದ ಎನ್ನಲಾಗಿದೆ. ನವೆಂಬರ್​ 9ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

Read This ಕಾರ್ಕಳ -ತೆಳ್ಳಾರಿನ ಮನೆಯೊಂದರಲ್ಲಿ ಜಿಂಕೆ ಮಾಂಸ ಪತ್ತೆ – ಓರ್ವ ಅರೆಸ್ಟ್

ಮದುವೆಗೆ ಎಂದು ಸಂತ್ರಸ್ತೆ ಕುಟುಂಬಸ್ಥರು ತೆರಳಿದ್ದು, ವಿಶೇಷ ಚೇತನ ಯುವತಿಯನ್ನ ಮನೆಯಲ್ಲೇ ಬಿಟ್ಟು ಹೋಗಿದ್ದರು. ಬೆಳಗ್ಗೆ 11 ಗಂಟೆ ಸುಮಾರಿಗೆ ಬಂದ ಗಾಂಜಾ ನಶೆಯಲ್ಲಿದ್ದ ಆರೋಪಿ ವಿಘ್ನೇಶ್, ಚಿಲಕ ಹಾಕಿದ್ದ ಮನೆಗೆ ನುಗ್ಗಿದ್ದಾನೆ. ಬಳಿಕ ಮನೆಯ ಒಳಗಿನಿಂದ ಚಿಲಕ ಹಾಕಿಕೊಂಡಿದ್ದಾನೆ. ಈ ವೇಳೆ ಮಗಳನ್ನು ನೋಡಿಕೊಂಡು ಹೋಗೋಣ ಎಂದು ತಾಯಿ ಬಂದಾಗ ಮನೆ ಒಳಗಿನಿಂದ ಚಿಲಕ ಹಾಕಿರುವುದು ಗೊತ್ತಾಗಿದೆ. ಹೀಗಾಗಿ ಕಾಲಿನಿಂದ ಒದ್ದು ಆಕೆ ಬಾಗಿಲನ್ನು ತೆರೆದಿದ್ದು, ಮಗಳ ಸ್ಥಿತಿ ಕಂಡು ಶಾಕ್​ ಆಗಿದ್ದಾಳೆ. ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ ಆರೋಪಿ, ಆಕೆಯ ಬಟ್ಟೆಗಳನ್ನೆಲ್ಲ ತೆಗಿದಿದ್ದ. ಬಾಗಿಲು ಓಪನ್​ ಆದ ಹಿನ್ನಲೆ ಅವಿತು ಕುಳಿತಿದ್ದ. ಸಂತ್ರಸ್ತೆ ತಾಯಿಯ ಕಣ್ಣಿಗೆ ಬಿದ್ದಿದ್ದೇ ತಡ, ಒಳ ಉಡುಪು ಧರಿಸಿ ಎಸ್ಕೇಪ್​ ಆಗಿದ್ದಾನೆ.

Read This ಕಟಪಾಡಿ ಓವರ್ ಪಾಸ್ ನಿರ್ಮಾಣ ಕಾಮಗಾರಿ : ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ

ಘಟನೆ ಬಳಿಕ ತಕ್ಷಣ ಅಲರ್ಟ್​ ಆದ ಸ್ಥಳೀಯರು ಆರೋಪಿ ವಿಘ್ನೆಶ್​ನನ್ನು ಹಿಡಿದು ಮನಸೋ ಇಚ್ಛೆ ತಳಿಸಿದ್ದಾರೆ. ಬಳಿಕ ಪೊಲೀಸರಿಗೆ ವಿಘ್ನೇಶ್​​ನನ್ನು ಒಪ್ಪಿಸಲಾಗಿದ್ದು, ಆರೋಪಿಯನ್ನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ.

Share Information